ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ

ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ

ಕೃಷಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ.ವಿ. ಸೂಚನೆ

ದಾವಣಗೆರೆ ಜೂ. 7 – ಮುಂಗಾರು ಹಂಗಾಮು ಆರಂಭವಾಗಿದ್ದು ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು.

ಅವರು ಇಂದು ನಗರದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಗ್ರಾಣದಲ್ಲಿ ದಾಸ್ತಾನು ಮಾಡಲಾದ ಬಿತ್ತನೆ ಬೀಜದ ಉಗ್ರಾಣ ಪರಿಶೀಲನೆ ನಡೆಸಿ, ರೈತರಿಗೆ ಬೀಜ ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತನಾಗಿರುವ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಸ್ಥಳದಲ್ಲಿದ್ದ ರೈತರೊಂದಿಗೆ ಕೃಷಿಯ ಬಗ್ಗೆ  ಹಾಗೂ ಕುಂದು ಕೊರತೆ ವಿಚಾರಿಸಿ, ನಂತರ ದಾವಣಗೆರೆ ನಗರದಲ್ಲಿರುವ ಕೇಂದ್ರ ಉಗ್ರಾಣ ನಿಗಮದ ವೇರ್ ಹೌಸ್‍ಗೆ ಭೇಟಿ ನೀಡಿ ಗೊಬ್ಬರದ ದಾಸ್ತಾನನ್ನು ಪರಿಶೀಲಿಸಿ ಕೃಷಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ರೈತರಿಗೆ ಸಮರ್ಪಕವಾಗಿ ಬೀಜ ಮತ್ತು ಗೊಬ್ಬರವನ್ನು ವಿತರಿಸುವಂತೆ ಹಾಗೂ ರೈತರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಜನಪರವಾಗಿ ಹಾಗೂ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

error: Content is protected !!