ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಡಾ.ಪ್ರಭಾ

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಡಾ.ಪ್ರಭಾ

ದಾವಣಗೆರೆ, ಜೂ.24- ನವದೆಹಲಿಯ ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ಮೊದಲ ಮಹಿಳಾ ಸಂಸದೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್, ಸಂಸತ್ ಪ್ರವೇಶಕ್ಕೂ ಮುನ್ನ ಸಂಸತ್ ಭವನದ ಮೆಟ್ಟಿಲುಗಳಿಗೆ ನಮಸ್ಕರಿಸಿ ಸರಳತೆ ತೋರಿದರು.  ಅಲ್ಲದೇ, ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು.

ಪ್ರಭಾ ಅವರು ಪ್ರಮಾಣ ಸ್ವೀಕರಿಸುತ್ತಿರುವುದನ್ನು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಪುತ್ರರಾದ ಸಮರ್ಥ, ಶಿವ, ಪುತ್ರಿ ಶ್ರೇಷ್ಠಾ ಅವರುಗಳು ಸಂಸದರ ಫ್ಯಾಮಿಲಿ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸಿದರು.

ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು ತಮ್ಮ ಸೊಸೆ ಪ್ರಮಾಣ ವಚನ ಸ್ವೀಕರಿಸುತ್ತಿದುದನ್ನು ದೂರದರ್ಶನದಲ್ಲಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ಇವರೊಂದಿಗೆ ಉದ್ಯಮಿ ಅಣಬೇರು ರಾಜಣ್ಣ ಇದ್ದರು.

error: Content is protected !!