ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಹರ್ಷ
ದಾವಣಗೆರೆ, ಜು. 23- ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿರುವುದು ತುಂಬಾ ಸಂತೋಷವಾಗಿದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.
ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು, ರೈತರು ಹಾಗೂ ಅಭಿವೃದ್ಧಿಗೆ ಸಂಪೂರ್ಣವಾದ ಒತ್ತು ನೀಡಲಾಗಿದ್ದು, ವಿಶೇಷವಾಗಿ ಈ ಸಾಲಿನ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ಅನುದಾನವನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.
ಉದ್ಯೋಗ ಸೃಷ್ಠಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಉದ್ಯೋಗ, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ 1.84 ಲಕ್ಷ ಕೋಟಿ ಮೀಸಲಿಟ್ಟಿದ್ದು, ಒಂದು ಸಾವಿರ ಕೈಗಾರಿಕಾ ತರಬೇತಿ ಕೇಂದ್ರಗಳ ಸ್ಥಾಪನೆ ಹಾಗೂ 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ಮತ್ತು 500 ಟಾಪ್ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ಶಿಪ್‌ಗೆ ಅವಕಾಶ, ಮಹಿಳೆಯರ ಸಬಲೀಕರಣಕ್ಕಾಗಿ ಲಖ್ಪತಿ ದೀದಿ ಯೋಜನೆಯಡಿ 3 ಲಕ್ಷ ಕೋಟಿ ಮೀಸಲಿಟ್ಟಿದ್ದು, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮೂರು ಕೋಟಿ ವಸತಿ ನಿರ್ಮಾಣ, ಮುದ್ರಾ ಯೋಜನೆಯಡಿ 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ, ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ 300 ಯೂನಿಟ್ ಉಚಿತ ವಿದ್ಯುತ್ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದ್ದು ಹಾಗೂ ಇನ್ನೂ ಹಲವು ಯೋಜನೆಗಳನ್ನು ಪ್ರಕಟಿಸಿರುವುದು, ಸಮೃದ್ಧ ಹಾಗೂ ಬಲಶಾಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಲಾಗಿರುವ ಈ ಬಾರಿಯ ಬಜೆಟ್ ಸ್ವಾಗತಾರ್ಹವಾಗಿದೆ ಎಂದು ಸಿದ್ದೇಶ್ವರ್ ಹೇಳಿದ್ದಾರೆ.