ದಾವಣಗೆರೆ, ಆ. 13 – ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಇಂದು ಸಂಜೆ ಮ್ಯಾರಾಥಾನ್ ನಡೆಯಿತು.
ಮ್ಯಾರಾಥಾನ್ ನಂತರ ಜಿಲ್ಲಾಡಳಿತ ಭವನದ ಮೆಟ್ಟಿಲುಗಳ ಮೇಲೆ ತಿರಂಗಾ ಗೀತ-ಗಾಯನದ ಅಂಗವಾಗಿ ವಿವಿಧ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು. ವಿದ್ಯಾರ್ಥಿಗಳು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಹಾಗೂ ವಿವಿಧ ಇಲಾಖೆ ಅಧಿಕಾರಿ ಗಳು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಭಾಗವಹಿಸಿದ್ದರು.