ಸಂಸದರ ನೂತನ ಜನ ಸಂಪರ್ಕ ಕಚೇರಿ ಉದ್ಘಾಟನೆ

ಸಂಸದರ ನೂತನ ಜನ ಸಂಪರ್ಕ ಕಚೇರಿ ಉದ್ಘಾಟನೆ

 ದಾವಣಗೆರೆ, ಆ. 1 – ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯ 31 ಮತ್ತು 32ನೇ ಕೊಠಡಿಯಲ್ಲಿ ತಮ್ಮ ನೂತನ ಜನ ಸಂಪರ್ಕ ಕಚೇರಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜನ ಸಂಪರ್ಕ ಕಚೇರಿಯನ್ನು ಆರಂಭಿಸಲಾಗಿದ್ದು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಕಚೇರಿಗೆ ತಲುಪಿಸುವಂತೆ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

error: Content is protected !!