ದಾವಣಗೆರೆ, ಸೆ. 11- ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧಿಸುತ್ತೇನೆ ಎಂದು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಜ್ಯೂನಿಯರ್, ಸೀನಿಯರ್ ಎನ್ನುವ ಪ್ರಶ್ನೆ ಬರುವುದಿಲ್ಲ.
ಶಾಸಕರು ಯಾರಿಗೆ ಬಹುಮತ ನೀಡುತ್ತಾರೋ ಅವರಿಗೆ ಹೈ ಕಮಾಂಡ್ `ಎಸ್’ ಎನ್ನುವುದು ರೂಢಿ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರು ಒಳ್ಳೆಯ ಆಡಳಿತ ಮಾಡುತ್ತಿದ್ದಾರೆ. ಹೈಕಮಾಂಡ್ ಆಶೀರ್ವಾದ ಇರುವವರೆಗೂ ಅವರೇ ಅಧಿಕಾರ ಮಾಡಲಿ ಎಂದ ಅವರು, ಕೆಲವರು ಬಾಯಿಗೆ ಬಂದಂತೆ ಮಾತನಾಡಿ ಹಗುರಾಗುತ್ತಾರಷ್ಟೇ ಎಂದು ಹೇಳಿದರು.