14ನೇ ವಾರ್ಡ್‍ನಲ್ಲಿ 1 ಕೋಟಿ ರೂ. ಕಾಮಗಾರಿಗಳಿಗೆ ಎಸ್ಸೆಸ್ ಚಾಲನೆ

14ನೇ ವಾರ್ಡ್‍ನಲ್ಲಿ 1 ಕೋಟಿ ರೂ. ಕಾಮಗಾರಿಗಳಿಗೆ ಎಸ್ಸೆಸ್ ಚಾಲನೆ

ದಾವಣಗೆರೆ, ಸೆ.16- ನಗರದ 14ನೇ ವಾರ್ಡ್‍ನಲ್ಲಿ 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು,  ಸಿದ್ಧರಾಮಯ್ಯ ಉತ್ತಮ ಆಡಳಿತಗಾರ ರಾಗಿದ್ದು, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.

ಸಿದ್ದರಾಮಯ್ಯ ಇರುವುದರಿಂದಲೇ ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮವಾಗಿದೆ. 5 ಗ್ಯಾರಂಟಿಗಳನ್ನು ನೀಡಿದ್ದರೂ ಸಹ ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಆಗುತ್ತಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಳೆದ 1 ವರ್ಷದಿಂದ ಸುಮಾರು 30 ಕೋಟಿ ಅನುದಾನ ತರಲಾಗಿದೆ. ಈ ಅನುದಾನದಲ್ಲಿ ಕ್ಷೇತ್ರದ 50ಕ್ಕೂ ಹೆಚ್ಚು ಶಾಲಾ ಕೊಠಡಿಗಳು, ದೇವಸ್ಥಾನಗಳು, ಸಮುದಾಯ ಭವನ, ಶಾದಿಮಹಲ್ , ರಸ್ತೆ ಮತ್ತು ಒಳಚರಂಡಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾಪೌರರಾದ ವಿನಾಯಕ ಪೈಲ್ವಾನ್,  ಸದಸ್ಯ ಕೆ.ಚಮನ್‍ಸಾಬ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಜಗದೀಶ್, ಆಯುಕ್ತೆ  ರೇಣುಕಾ, ಇಟ್ಟಿಗುಡಿ ಮಂಜುನಾಥ್, ಸ್ಥಳೀಯ ಮುಖಂಡರಾದ ಹಾಸಬಾವಿ ರಾಜಣ್ಣ ಹಾಗೂ ಇತರರಿದ್ದರು.

error: Content is protected !!