ದಾವಣಗೆರೆ, ಅ.3- ಇಂದಿನಿಂದ 9 ದಿನಗಳ ಕಾಲ ನಡೆಯಲಿರುವ ನವರಾತ್ರಿ ಮಹೋತ್ಸವಕ್ಕೆ ನಗರದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಿ ದೇವಸ್ಥಾನದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ಕುಟುಂಬದವರು ದೀಪ ಬೆಳಗಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಕೈಗಾರಿಕೋದ್ಯಮಿ ಎಸ್. ಎಸ್. ಗಣೇಶ್ ಸೇರಿದಂತೆ ಕುಟುಂಬದ ಸದಸ್ಯರು, ದೇವಸ್ಥಾನ ಟ್ರಸ್ಟ್ ಧರ್ಮದರ್ಶಿ ಗಳು ಮತ್ತು ಇತರರು ಈ ಸಂದರ್ಭದಲ್ಲಿದ್ದರು.
ವಿಶ್ವ ಹಿಂದೂ ಪರಿಷದ್ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿಯಿಂದ ಪಿ.ಬಿ. ರಸ್ತೆಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ದುರ್ಗಾ ದೇವಿಯ ವಿಗ್ರಹ, ಘಟ ಸ್ಥಾಪನೆ ನೆರವೇರಿತು.
ನಗರದಲ್ಲಿರುವ ಶಕ್ತಿ ದೇವತೆಯರ ದೇವಾಲಯಗಳು ವಿಶೇಷ ಪೂಜೆಗಳು ನಡೆದವು. ವಿವಿದ ಬಗೆಯಲ್ಲಿ ದೇವತಾ ಮೂರ್ತಿಗಳನ್ನು ಅಲಂಕರಿಸಲಾಗಿತ್ತು. ಸಾರ್ವಜನಿಕರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದರು.