ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಜಯಭೇರಿ : ಸಂಭ್ರಮಾಚರಣೆ

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಜಯಭೇರಿ : ಸಂಭ್ರಮಾಚರಣೆ

ದಾವಣಗೆರೆ, ಅ.8- ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂದೆ ಇಂದು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಲಾಯಿತು. 

ವಿಧಾನ ಪರಿಷತ್ ಸದಸ್ಯ ಧನಂಜಯ್ ಸರ್ಜಿ, ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ|| ಎ.ಹೆಚ್. ಶಿವಯೋಗಿ ಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅಣ್ಣೇಶ್, ಅಭಿಯಾನದ ಸಂಚಾಲಕ ಮುಕುಂದಪ್ಪ, ಹಾವೇರಿ ಉಸ್ತುವಾರಿ ಎಲ್. ಎನ್. ಕಲ್ಲೇಶ್, ಬಿಜೆಪಿ ವಕ್ತಾರ ಬಿ.ಎಂ. ಸತೀಶ್ ಮತ್ತು ಇತರರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!