ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಮಲೇಬೆನ್ನೂರು : ವೀರಭದ್ರೇಶ್ವರ ಟ್ರಸ್ಟ್ ಸಮಿತಿ ಉಪಾಧ್ಯಕ್ಷ ಬಿ.ನಾಗೇಂದ್ರಪ್ಪ ಶ್ಲ್ಯಾಘನೆ

ಮಲೇಬೆನ್ನೂರು, ಅ.8- ಸ್ತ್ರೀ ಸಬಲೀಕರಣ, ಕೃಷಿ ಉತ್ತೇಜನ, ಹೈನುಗಾರಿಕೆ, ಕರಕುಶಲತೆ ಮುಂತಾದ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮಿಸುತ್ತಿದೆ ಎಂದು ವೀರಭದ್ರೇಶ್ವರ ಟ್ರಸ್ಟ್ ಸಮಿತಿಯ ಉಪಾಧ್ಯಕ್ಷ ಬಿ.ನಾಗೇಂದ್ರಪ್ಪ ಹೇಳಿದರು. 

ಅವರು ಸೋಮವಾರ ಪಟ್ಟಣದ ಹೊರವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ  ಅವರು ಮಾತನಾಡಿದರು.

ದಾವಣಗೆರೆಯ ಹಿರಿಯ ವಕೀಲರಾದ ಶ್ರೀಮತಿ ಅನಿತಾ ಮಾತನಾಡಿ, ಮಹಿಳೆಯರು ಇತ್ತೀಚೆಗೆ ಹೆಚ್ಚೆಚ್ಚು ವಿದ್ಯಾವಂತರಾಗಿರುವುದು ಸಂತೋಷಕರ. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ. ಕಾನೂನು ಅರಿವೂ ಸಹ ಅಗತ್ಯವಿದೆ. ಇಂತಹ ಜ್ಞಾನ ವಿಕಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಹಿಳಾ ಹಕ್ಕು ಬಾಧ್ಯತೆಗಳನ್ನು ಗ್ರಹಿಸಿ ಬದುಕಿಗೆ ಅಳವಡಿಸಿಕೊಂಡು ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.

ಮಲೇಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲಕ್ಷ್ಮಿದೇವಿ ಮಾತನಾಡಿ, ಮಹಿಳೆಯರು ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯವಂತ ಮಗುವನ್ನು ಪಡೆಯಬೇಕು. ಏನೇ ಆರೋಗ್ಯ ಸಮಸ್ಯೆ ಇದ್ದಲ್ಲಿ  ಹತ್ತಿರದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಎಂದು ತಿಳಿಸಿದರು.

ಮಲೇಬೆನ್ನೂರು ಪೋಲಿಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ಮಾತನಾಡಿ, ಸಾಮರ ಸ್ಯದಿಂದ ಸಂಸಾರಗಳಲ್ಲಿ ಅವಿನಾಭಾವ ಸಂಬಂಧ ಇರುತ್ತದೆ. ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶದ ಅರಿವನ್ನು ತಾಯಂದಿರು, ಮಕ್ಕಳಲ್ಲಿ ಮೂಡಿಸಬೇಕೆಂದು ತಿಳಿಸಿದರು. 

ಯೋಜನೆಯ ಜಿಲ್ಲಾ  ನಿರ್ದೇಶಕ ಎಂ.ಲಕ್ಷ್ಮಣ್, ಪ್ರಾದೇಶಿಕ ಕಛೇರಿಯ ಜ್ಞಾನ ವಿಕಾಸ ಯೋಜನಾಧಿಕಾರಿ ರತ್ನ ಮೈಪಾಲ್, ಅಧ್ಯಾತ್ಮ ಚಿಂತಕ ಹೊಳೆಸಿರಿಗೆರೆ ಸಿದ್ದೇಶ್‌ ಮಾತನಾಡಿದರು. 

ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ  ಹೊಳೆಸಿರಿಗೆರೆ ನಾಗನಗೌಡ್ರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಮಲೇಬೆನ್ನೂರು ಯೋಜನಾಧಿಕಾರಿ ವಸಂತ್ ದೇವಾಡಿಗ, ಮೇಲ್ವಿಚಾರಕರಾದ ಸಂಪತ್ ಲಕ್ಷ್ಮಿ, ಜ್ಞಾನ ವಿಕಾಸ ಸಮನ್ವಯಾ ಧಿಕಾರಿ ಸವಿತಾ, ಜ್ಞಾನ ವಿಕಾಸ ಒಕ್ಕೂಟದ ಅಧ್ಯಕ್ಷರಾದ ಸುಧಾ, ಸದಸ್ಯರಾದ ಸುಮ ಸೇರಿದಂತೆ ಇತರರು  ಭಾಗವಹಿಸಿದ್ದರು.

error: Content is protected !!