ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ಅಗತ್ಯ : ಸಚಿವ ಎಸ್ಸೆಸ್ಸೆಂ

ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ಅಗತ್ಯ : ಸಚಿವ ಎಸ್ಸೆಸ್ಸೆಂ

ದಾವಣಗೆರೆ, ಅ.13- ಈ ಹಿಂದೆ ಮಳೆಯಾದರೆ ಎಪಿಎಂಸಿ ಮಾರುಕಟ್ಟೆ ಹಾಗೂ ತಗ್ಗು ಪ್ರದೇಶದ ವ್ಯಾಪಾರಿಗಳು ತತ್ತರಿಸಿ ಹೋಗುತ್ತಿದ್ದರು. ಪ್ರಸ್ತುತ ವಾತವರಣ ಬದಲಾಗಿದೆ. ಎಂತಹ ಮಳೆಯಾದರೂ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿಯುತ್ತಿದೆ. ಯಾವುದೇ ಸಮಸ್ಯೆಗಳಿದ್ದರೂ ಅವುಗಳಿಗೆ ಶಾಶ್ವತವಾದ ಮುಕ್ತಿ‌ ದೊರಕುವಂಥಹ ಕಾರ್ಯಗಳಾಗಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು. 

ತಮ್ಮ ಗೃಹ ಕಚೇರಿ ಆವರಣದಲ್ಲಿ ರೈತರುಗಳ ಸಮಸ್ಯೆಗಳನ್ನು ಆಲಿಸಿ ಮನವಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ವೇ ಕಾರ್ಯಗಳು, ಕೆರೆಗಳ ಭರ್ತಿ, ಹೊಸ ಕೆರೆಗಳ ನಿರ್ಮಾಣ, ಅರಣ್ಯೀಕರಣ, ಪರಿಸರ ರಕ್ಷಣೆ ಹಾಗೂ ಮಾಲಿನ್ಯ ತಡೆ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ರೈತರು ಜಿಲ್ಲಾ ಸಚಿವರ ಗಮನಕ್ಕೆ ತಂದರು. 

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಜಿಲ್ಲಾಡಳಿತ, ಜಿಲ್ಲಾ ಸರ್ವೇ ಅಧಿಕಾರಿಗಳು  ಮುಂತಾದ ಸಂಬಂಧ ಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ   ತಿಳಿಸಿದರು.  

ರೈತ ಮುಖಂಡ ಬಲ್ಲೂರು ರವಿಕುಮಾರ್, ಜಿಲ್ಲೆಯಲ್ಲಿ ಹೊಸ ಕೆರೆಗಳ ನಿರ್ಮಾಣಕ್ಕೆ ಮನವಿ ಸಲ್ಲಿಸಿ,  ಎಲ್ಲಾ ತಾಲ್ಲೂಕುಗಳಲ್ಲಿ ಸರ್ಕಾರಿ ಜಮೀನುಗಳಿವೆ ಪ್ರತಿ ತಾಲ್ಲೂಕಿಗೆ ಎರಡು ಹೊಸ ಕೆರೆಗಳನ್ನು
ನಿರ್ಮಾಣ ಮಾಡಿದರೆ ಅಂತರ್ಜಲ ಮಟ್ಟ ಹೆಚ್ಚಳವಾಗಿ‌ ನೀರಿನ ಭವಣೆ ನೀಗುವುದು ಎಂದರು. 

ಸಚಿವರು ಸಂಬಂಧ ಪಟ್ಟವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರುಗಳು ಕಾರ್ಯಕರ್ತರು ಇದ್ದರು.

error: Content is protected !!