ಹಾವೇರಿ, ನ.5-ಶಿಗ್ಗಾಂವಿ-ಸವಣೂರು ವಿಧಾನಸಭೆಯ ಉಪ ಚುನಾ ವಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕ್ಷೇತ್ರದ ಚಿಲ್ಲೂರ-ಬಡ್ನಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸಿನ್ ಆಹ್ಮದ್ ಖಾನ್ ಪಠಾಣ್ ಪರ ಮತ ಯಾಚಿಸಿದರು.
ಕಾಂಗ್ರೆಸ್ ಪಕ್ಷವು ಜನಪರ ಪಕ್ಷವಾಗಿದೆ. ಪಕ್ಷದ ಗ್ಯಾರಂಟಿ ಯೋಜನೆಗಳು ಜನತೆಗೆ ಅನುಕೂಲ ನೀಡಿವೆ. ಕೊಟ್ಟ ಮಾತಿನಂತೆ ನಡೆಯುವ ಪಕ್ಷ ಕಾಂಗ್ರೆಸ್ ಪಕ್ಷವಾಗಿದ್ದು ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಮತದಾರರ ಮತ ನೀಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕರಾದ ಲಕ್ಷಣ ಸವದಿ, ಬಸವಂತಪ್ಪ, ಪಕ್ಷದ ಅಭ್ಯರ್ಥಿ ಯಾಸಿನ್ ಆಹ್ಮದ್ ಖಾನ್ ಪಠಾಣ್, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಆಹ್ಮದ್ ಖಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್, ಗ್ರಾಮಾಂತರ ಬ್ಲಾಕ್ ವಿಭಾಗದ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ್ ಹಾಗೂ ಇತರರು ಇದ್ದರು.