ದಾವಣಗೆರೆ, ನ.4- ತಾಲ್ಲೂಕಿನ ಮತ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹೂವಿನಮಡು ಗ್ರಾಮದಲ್ಲಿ ಸರ್ಕಾರಿ ಶಾಲೆ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿರುವ ಕುಂದುಕೊರತೆ ನೀಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಸೂಚಿಸಿದರು.
ಹೂವಿನಮಡು ಸರ್ಕಾರಿ ಶಾಲೆಯು ಅಭಿವೃದ್ಧಿಯಿಂದ ವಂಚಿತವಾಗಿದ್ದು, ಸೌಲಭ್ಯಗಳನ್ನು ಒದಗಿಸುವಂತೆ ಕುರಿತು ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿದರು.
ಸಚಿವರು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ದೂರವಾಣಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಯಾವ ಯಾವ ಸರ್ಕಾರಿ ಶಾಲೆಗಳಲ್ಲಿ ಕುಂದುಕೊರತೆಗಳು ಕಂಡು ಬರುತ್ತವೇಯೋ ಅವುಗಳನ್ನು ಶೀಘ್ರವಾಗಿ ನಿವಾರಿಸುವಂತಹ ಕ್ರಮಗಳನ್ನು ಜರುಗಿಸುವಂತೆ ತಿಳಿಸಿದರು.
ಈ ವೇಳೆ ಹೂವಿನಮಡು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜಪ್ಪ, ರೇಖಾ, ಎಸ್.ಡಿ.ಎಂ.ಸಿ ಅಧ್ಯಕ್ಷ ರಂಗಪ್ಪ, ಶಿಕ್ಷಕಿ ಭಾಗ್ಯಲಕ್ಷ್ಮಿ, ಗ್ರಾಮದ ಮುಖಂಡರಾದ ಡಾ.ಮಲ್ಲಿಕಾರ್ಜುನಪ್ಪ, ಹೆಚ್.ಬಿ ಜಯ್ಯಪ್ಪ, ಗ್ರಾಮಸ್ಥರಾದ ಮಹಾಂತೇಶ್, ನಾಗರಾಜ್ ಹಾಗೂ ಇತರರು ಇದ್ದರು.