ದಾವಣಗೆರೆ, ನ.12- ಇಲ್ಲಿನ ಶಕ್ತಿನಗರದ ಮೂರನೇ ಕ್ರಾಸ್ನಲ್ಲಿರುವ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ರಾಜ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮಂಗಳವಾರ ಬೆಳಿಗ್ಗೆಯೇ ನಡೆದ ಈ ದಾಳಿಯಲ್ಲಿ 1 ಲಕ್ಷ ರೂ. ನಗದು, ಇನ್ನೋವಾ ಕಾರು ಹಾಗೂ ಆಸ್ತಿಯ ದಾಖಲೆ ಪತ್ತೆಯಾಗಿವೆ ಎನ್ನಲಾಗಿದೆ. ಅನುಕಂಪದ ಆಧಾರದ ಮೇರೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ರಾಜ್, ಹಲವು ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ಸ್ಪೆಕ್ಟರ್ ಮಧುಸೂದನ್ ಹಾಗೂ ಪ್ರಭು ಸೇರಿ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.