ದಾವಣಗೆರೆ, ನ. 18- ಬಿಜೆಪಿ ನನಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ ಎಂದು ರಾಜ್ಯ ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ಜಿ ಎಸ್ ಶ್ಯಾಮ್ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಕ್ರಿಯ ಸದಸ್ಯತ್ವ ಅಭಿಯಾನದ ಅರ್ಜಿಗಳನ್ನು ಬಿಜೆಪಿ ಜಿಲ್ಲಾಧ್ಯಕ್ಷ ರಾಜ ಶೇಖರ್ ನಾಗಪ್ಪ ಅವರಿಗೆ ಸಲ್ಲಿಸಿ ಈ ವಿಷಯ ತಿಳಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸ್ಥಳೀಯ ಮುಖಂಡರೊಂದಿಗೆ ಸದಸ್ಯತ್ವ ಅಭಿಯಾನ ಮಾಡುವ ಮೂಲಕ ಸಾವಿರಾರು ಜನರು ಸದಸ್ಯತ್ವ ಪಡೆದಿದ್ದಾರೆ. ಇದು ಪಕ್ಷದ ಸಂಘಟನೆಗೆ ಹೆಚ್ಚು ಅನುಕೂಲವಾಗಲಿದೆ, ಮುಂದೆ ನಡೆಯುವ ಎಲ್ಲಾ ಚುನಾವಣೆ ಹಾಗೂ ಪಕ್ಷದ ಸಭೆ ಸಮಾರಂಭಗಳಿಗೆ ಲಕ್ಷಾಂತರ ಕಾರ್ಯಕರ್ತರು ಇದಕ್ಕೆ ಸಾಕ್ಷಿಯಾಗುವ ಮೂಲಕ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿದೆ ಎಂದು ತೋರಿಸಲಿದ್ದಾರೆ ಎಂದು ಶ್ಯಾಮ್ ಹೇಳಿದರು.
ಸದಸ್ಯತ್ವ ಅಭಿಯಾನದಿಂದ ಪಕ್ಷಕ್ಕೆ ದೊಡ್ಡ ಲಾಭವಿದೆ, ದಿನ ದಿನಕ್ಕೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೊಂದು ರಾಜಕೀಯ ಇತಿಹಾಸದಲ್ಲಿ ದೊಡ್ಡ ಅಭಿಯಾನ ಆಗಿದ್ದು, ನನಗೂ ಕೆಲಸ ಮಾಡುತ್ತಿರುವುದು ತೃಪ್ತಿ ತಂದಿದೆ ಎಂದು ತಿಳಿಸಿದರು.
ಅರ್ಜಿಗಳನ್ನು ಸಲ್ಲಿಸಿದ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಬಿ. ಟಿ. ಸಿದ್ದಪ್ಪ, ರೈತ ವಕ್ತಾರ ಕೊಳೇನಹಳ್ಳಿ ಸತೀಶ್, ಪಿ.ಸಿ. ಶ್ರೀನಿವಾಸ್, ಕೊಟ್ರೇಶ್, ಕಲ್ಲೇಶ್, ವಿಶ್ವಾಸ್, ಮಂಜು, ರಾಜು, ನವೀನ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.