ಮಕ್ಕಳ ರಕ್ಷಣೆ ಎಲ್ಲಾ ಇಲಾಖೆ ಅಧಿಕಾರಿಗಳ ಕರ್ತವ್ಯ

ಮಕ್ಕಳ ರಕ್ಷಣೆ ಎಲ್ಲಾ ಇಲಾಖೆ ಅಧಿಕಾರಿಗಳ ಕರ್ತವ್ಯ

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ.ಕೊಳ್ಳ

ದಾವಣಗೆರೆ, ಡಿ.5- ಮಕ್ಕಳೇ ನಮ್ಮ ದೇಶದ ಸಂಪತ್ತಾಗಿದ್ದು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸುವಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ.ಕೊಳ್ಳ ತಿಳಿಸಿದರು. 

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಲಾದ ಮಕ್ಕಳ ಸಂರಕ್ಷಣಾ ಕಾಯ್ದೆಗಳು ಹಾಗೂ ಮಕ್ಕಳೊಂದಿಗೆ ನಡೆಸಿದ ಸಂವಾದದಲ್ಲಿ ಭಾಗವಹಿಸಿ, ಮಾತನಾಡಿದರು. 

ಮಕ್ಕಳಿಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆಗಳು ನಡೆದಿದ್ದಲ್ಲಿ ಅಥವಾ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098 ಹಾಗೂ 112 ಕ್ಕೆ ಕರೆ ಮಾಡಬೇಕು. ತಕ್ಷಣ ಮಕ್ಕಳ ಸಂರಕ್ಷಣೆ ಮಾಡಲು ಕಾರ್ಯಪ್ರವೃತ್ತರಾಗುವುದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳ ಆದ್ಯ ಕರ್ತವ್ಯ ವಾಗಿರುತ್ತದೆ. 

ಮಕ್ಕಳು ಪ್ರತಿ ದಿನ ಶಾಲೆಗೆ, ಕಾಲೇಜಿಗೆ ಹೋಗಲು ಬಸ್ ವ್ಯವಸ್ಥೆ ಕಲ್ಪಿಸಿಕೊಡಲು ಹಾಗೂ ಹಾಸ್ಟೆಲ್ ಗಳಲ್ಲಿ ಗ್ರಂಥಾಲಯ ಗಳ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಹಾಗೂ ಇನ್ನಿತರೆ ಅಹವಾಲು ಗಳನ್ನು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದೆ ವ್ಯಕ್ತ ಪಡಿಸಿದ್ದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ಮಕ್ಕಳು ನಿರ್ಭಯವಾಗಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ, ಜೆಜೆ ಕಾಯ್ದೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಜವಾಬ್ದಾರಿಗಳ ಮತ್ತು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ ಮಂಡಳಿಯ ಕುರಿತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಮಕ್ಕಳು ಉತ್ಸಾಹದಿಂದ ಅಹವಾಲು ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರೆಣ್ಣವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ.ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜಾ ನಾಯಕ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!