ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಡಳಿತ : ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ

ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಡಳಿತ : ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ

ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ನಿರ್ದೇಶನದನ್ವಯ ಜಗಳೂರು ತಾಲ್ಲೂಕಿನಲ್ಲಿ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಡಳಿತ

ಜಗಳೂರು, ಡಿ. 15 – ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲಾಡಳಿತ ಜಗಳೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳಿಗೆ ಪರಿಹಾರ ನೀಡಿತು.

ಕಳೆದ ವಾರ ಜಗಳೂರು ತಾಲ್ಲೂಕಿನ ಸಂಗೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಲು ತೆರಳಿದ ವೇಳೆ ಕಲ್ಲೇದೇವರಪುರ, ಸಂಗೇನಹಳ್ಳಿ, ಬೆಣ್ಣೆಹಳ್ಳಿ, ಬಸಪ್ಪನಹಟ್ಟಿ, ಗೌರಮ್ಮನಹಟ್ಟಿ ಗ್ರಾಮಗಳ ಗ್ರಾಮಸ್ಥರು 10ಕ್ಕೂ ಹೆಚ್ಚು ಸಮಸ್ಯೆಗಳನ್ನು ಸಂಸದರ ಬಳಿ ಹೇಳಿಕೊಂಡರು.

ಈ ಸಮಸ್ಯೆಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಅವರೊಂದಿಗೆ ಮಾತನಾಡಿ ಕಲ್ಲೇದೇವರಪುರ, ಸಂಗೇನಹಳ್ಳಿ, ಬೆಣ್ಣೆಹಳ್ಳಿ, ಬಸಪ್ಪನಹಟ್ಟಿ, ಗೌರಮ್ಮನಹಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚನೆ ನೀಡಿದರು.

ಕಲ್ಲೇದೇವರಪುರ, ಸಂಗೇನಹಳ್ಳಿ, ಬೆಣ್ಣೆಹಳ್ಳಿ, ಬಸಪ್ಪನಹಟ್ಟಿ, ಗೌರಮ್ಮನಹಟ್ಟಿ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಅವರುಗಳು ಸಂಗೇನಹಳ್ಳಿ ಕೆರೆಯ ಸುತ್ತ ಸ್ವಚ್ಚತೆಗೆ ಚಾಲನೆ ನೀಡಿದರು.

ನಂತರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಲ್ಲೇದೇವರಪುರ, ಸಂಗೇನಹಳ್ಳಿ, ಬೆಣ್ಣೆಹಳ್ಳಿ, ಬಸಪ್ಪನಹಟ್ಟಿ, ಗೌರಮ್ಮನಹಟ್ಟಿ ಗ್ರಾಮಗಳ ಬಳಿ ಬಾಕ್ಸ್ ಚರಂಡಿಗಳನ್ನು ನಿರ್ಮಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಹೆದ್ದಾರಿ ಪಕ್ಕದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಬಾಕ್ಸ್ ಚರಂಡಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಮತ್ತು ಸಿಇಒ ಸುರೇಶ್ ಇಟ್ನಾಳ್ ಸೂಚಿಸಿದರು.

ಕಲ್ಲೇದೇವರಪುರ ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕವನ್ನು ಸ್ಥಳಾಂತರಿಸಲು ಸೂಚನೆ ನೀಡಿದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ ವಿದ್ಯುತ್ ಪರಿವರ್ತಕವನ್ನು ಸ್ಥಳಾಂತರಿಸಿದರು. ಸಂಗೇನಹಳ್ಳಿ ಗ್ರಾಮದ ಶಾಲಾ ಕೊಠಡಿ ದುರಸ್ತಿ ಮತ್ತು ಸೇತುವೆ ನಿರ್ಮಾಣ ಮಾಡಲು ಹಾಗೂ ಕಲ್ಲೇದೇವರಪುರ ಗ್ರಾಮದ ಸುಪ್ರಸಿದ್ದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನ ದುರಸ್ತಿಗೆ ಸ್ವಲ್ಪ ಸಮಯಾವಕಾಶವನ್ನು ಬಗ್ಗೆ  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಅವರು ಕೋರಿ, ಆದಷ್ಟು ಶೀಘ್ರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ನಂತರ ಸ್ಥಳದಿಂದಲೇ ಸಂಸದರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಅವರು ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹಾರ ಮಾಡಿರುವ ಬಗ್ಗೆ ತಿಳಿಸಿದಾಗ, ಸಂಸದರು ಸಂಗೇನಹಳ್ಳಿ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಅವರೊಂದಿಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಶಿವಮೂರ್ತಿ, ಜಗಳೂರು ತಹಶೀಲ್ದಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು
ಸೇರಿದಂತೆ, ವಿವಿಧ ಇಲಾಖೆ ಅಧಿಕಾರಿಗಳು, ಅಧ್ಯಕ್ಷೆ ವಸಂತ ಕುಮಾರಿ, ತಾಲ್ಲೂಕು
ಪಂಚಾಯಿತಿ ಮಾಜಿ ಸದಸ್ಯ ಸೂರಪ್ಪ,
ಮುಖಂಡ ಕೊಟ್ಟಿಗೆ ತಿಪ್ಪೇಸ್ವಾಮಿ ಸೇರಿದಂತೆ ಹಲವರಿದ್ದರು.

error: Content is protected !!