ಬೆಂಗಳೂರು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯ : 300 ಕ್ರೀಡಾಪಟುಗಳು ಭಾಗಿ

ಬೆಂಗಳೂರು ವಿಭಾಗ ಮಟ್ಟದ ಬ್ಯಾಡ್ಮಿಂಟನ್ ಪಂದ್ಯ : 300 ಕ್ರೀಡಾಪಟುಗಳು ಭಾಗಿ

ದಾವಣಗೆರೆ, ಡಿ. 30- ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ   2024-25 ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬೆಂಗಳೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲ್‌ ಬ್ಯಾಡ್ಮಿಂಟನ್ ಪಂದ್ಯಾವಳಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆರಂಭಗೊಂಡಿತು.

ಮೊದಲ ದಿನವಾದ ಇಂದು 14 ವರ್ಷ ವಯೋಮಿತಿಯೊಳಗಿನ ಬಾಲಕರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಂಗಳೂರು ವಿಭಾಗ ವ್ಯಾಪ್ತಿಯ 11 ಜಿಲ್ಲೆಗಳಿಂದ ಬಾಲಕ ಹಾಗೂ ಬಾಲಕಿಯರ 11 ತಂಡಗಳ ಆಟಗಾರರು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.

ನಾಳೆ ದಿನಾಂಕ 31ರ ಮಂಗಳವಾರ  17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಬ್ಯಾಡ್ಮಿಂಟನ್ ಕ್ರೀಡೆ ನಡೆಯಲಿದ್ದು, ತಲಾ 11 ತಂಡಗಳು ಭಾಗವಹಿಸಲಿವೆ.

ಈ ಎರಡು ದಿನಗಳ ಕ್ರೀಡಾಕೂಟದಲ್ಲಿ ಒಟ್ಟು 300 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಎರಡೂ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ನಿರ್ದೇಶಕ ದ್ವಾರಕೀಶ್ ನಾಯ್ಕ, ಕಾಂತಪ್ಪ, ಗದಿಗೆಪ್ಪ, ಗಣೇಶ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಸಂತೋಷ್ ಮತ್ತಿತರರು ಭಾಗವಹಿಸಲಿದ್ದಾರೆ.

error: Content is protected !!