ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ದಾವಣಗೆರೆ, ಜ. 1 –   ಜಿಲ್ಲಾಡಳಿತ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮ ರಣಾ ದಿನಾಚರಣೆಯನ್ನು ಬುಧವಾರ ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವ ಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ  ಆಚರಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಪಾಲಿಕೆ ಉಪಮಹಾಪೌರ ಸೋಗಿ ಶಾಂತಕುಮಾರ್, ಪಾಲಿಕೆ ಸದಸ್ಯರು, ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ಇತರರು ಇದ್ದರು.

error: Content is protected !!