ದಾವಣಗೆರೆ, ಜ. 3 – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ದಿನಾಂಕ 5 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ನಗರದ ಬಾಪೂಜಿ ಎಂಬಿಎ ಮೈದಾನಕ್ಕೆ ಆಗಮಿಸುವರು. ನಂತರ ಬೆಳಗ್ಗೆ 11.30 ಕ್ಕೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಎಂಬಿಎ ಮೈದಾನದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಯುವಜನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ಹೈಸ್ಕೂಲ್ ಮೈದಾನದಲ್ಲಿ ಕುರುಬ ಸಮಾಜ ಹಾಗೂ ಅಭಿಮಾನಿ ಬಳಗದಿಂದ ಆಯೋಜಿಸಿರುವ 537ನೇ ದಾಸಶ್ರೇಷ್ಟ ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.