ದಾವಣಗೆರೆ, ಜ. 7- ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳು ಮರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸತ್ಯಶೋಧನ ಸಮಿತಿ ಮಂಗಳವಾರ ನಗರದಲ್ಲಿನ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿತು.
ಚಿಗಟೇರಿ ಜಿಲ್ಲಾಸ್ಪತ್ರೆ, ಚಾಮರಾಜ ವೃತ್ತದ ಬಳಿಯ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ತಂಡವು, ಆಸ್ಪತ್ರೆ ಔಷಧಿ ಉಗ್ರಾಣ, ವಾರ್ಡ್ಗಳು ಮತ್ತು ಮಕ್ಕಳ ವಿಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿತು.
ಶಾಸಕ ಡಾ. ಚಂದ್ರು ಲಮಾಣಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ. ವಿಜಯಲಕ್ಷ್ಮಿ ತುಂಗ, ಡಾ. ಪದ್ಮ ಪ್ರಕಾಶ್, ರಾಜ್ಯ ವಕ್ತಾರ ಅಶೋಕ್ ಗೌಡ ಇತರರು ತಂಡದಲ್ಲಿದ್ದರು.
ಸತ್ಯಶೋಧನ ಸಮಿತಿ ಸದಸ್ಯರು ಪ್ರಥಮವಾಗಿ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಸಭೆ ನಡೆಸಿದರು. ನಂತರ ಆಸ್ಪತ್ರೆ ಔಷಧಿ
ಉಗ್ರಾಣ, ವಾರ್ಡ್ಗಳು ಮತ್ತು ಮಕ್ಕಳ ವಿಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ನಂತರ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಬಾಣಂತಿಯರ ಮತ್ತು ನವಜಾತ ಶಿಶುಗಳ ಸಾವಿನ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲ್ ಕುಮಾರ್ ನಾಯಕ್, ಐರಣಿ ಅಣ್ಣೇಶ್, ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಲೋಕಿಕೆರೆ ನಾಗರಾಜ್, ಜಿಲ್ಲಾ ವಕ್ತಾರ ಕೊಳೇನಹಳ್ಳಿ ಸತೀಶ್, ಸಾಮಾಜಿಕ ಜಾಲತಾಣ ಸಹ ಸಂಚಾಲಕ ಪ್ರದೀಪ್ ಕಾಡಾದಿ, ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಜಯ ಎಚ್.ಸಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಿಶ್ಚಿಮ ಗೌಡ್ರು, ಜಿಲ್ಲಾ ಮಾಧ್ಯಮ ಸಂಚಾಲಕ ಹೆಚ್.ಪಿ. ವಿಶ್ವಾಸ್, ಜಿಲ್ಲಾ ಸಾಮಾಜಿಕ ಜಾಲತಾಣ ಕೊಟ್ರೇಶ್ ಗೌಡ, ಹಾಲೇಶ್ ಇತರರು ಈ ಸಂದರ್ಭದಲ್ಲಿದ್ದರು.