ಬೆಂಗಳೂರು, ಜ. 7 – ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಜವಳಿ ವರ್ತಕ ಬಿ.ಸಿ. ಉಮಾಪತಿ,
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ದಾವಣಗೆರೆ ಕಾಂಗ್ರೆಸ್ ಮುಖಂಡರಾದ ಮಾಲತೇಶ್‌ರಾವ್ ಜಾಧವ್, ಅನಿತಾಬಾಯಿ ಮಾಲತೇಶ್‌ರಾವ್ ಜಾಧವ್, ಬಿ.ಹೆಚ್. ವೀರಭದ್ರಪ್ಪ ಮತ್ತು ಇತರರು ಭೇಟಿ ಮಾಡಿ ಆರೋಗ್ಯ ಕುಶಲೋಪರಿ ವಿಚಾರಿಸಿದರು.