ದಾವಣಗೆರೆ, ಜ.16- ಶ್ರೀ ರಂಭಾಪುರಿ ಜಗದ್ಗುರು ಡಾ. ವೀರ ಸೋಮೇಶ್ವರ ಸ್ವಾಮೀಜಿ ಅವರು, ಗುರುವಾರ ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಶುಭ ಹಾರೈಸಿದರು.
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ, ಶ್ರೀ ಮಡಿವಾಳ ಬಸವ ಮಾಚಿದೇವ ಸ್ವಾಮೀಜಿ ಸೇರಿದಂತೆ ಕೆಲವು ಮಠಾಧೀಶರೂ ಸಹ ಶಿವಶಂಕರಪ್ಪನವರನ್ನು ಭೇಟಿ ಮಾಡಿ
ಆರೋಗ್ಯ ವಿಚಾರಿಸಿದರು.