ಬೆಂಗಳೂರು, ಜ. 17- ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳು ಹಾಗೂ ಶ್ರೀ ನಿಡುಮಾಮಿಡಿ ಜಗದ್ಗುರು ಮಠ, ಗೂಳೂರು ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಮಾಡಿದರು.
ಬೆಂಗಳೂರಿನ ನಿವಾಸದಲ್ಲಿ ಶಾಸಕರ ಆರೋಗ್ಯ ವಿಚಾರಿಸಿ ಕುಶಲೋಪರಿ ನಡೆಸಿದರು.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಯುವ ನಾಯಕರಾದ ಸಮರ್ಥ್ ಶಾಮನೂರು, ಶಿವ ಶಾಮನೂರು ಮತ್ತಿತರರು ಉಪಸ್ಥಿತರಿದ್ದರು.