ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಜ. 20 – ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರೊಂದಿಗೆ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಈ‌ ಸಭೆಯಲ್ಲಿ ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಎಲ್ಲಾ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಲು ಅನುಸರಿಸಬೇಕಾದ ಮಾರ್ಗ ಸೂಚಿಗಳ‌ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಇದರೊಂದಿಗೆ ಅನುಸರಿಸಬೇಕಾದ ಮಾರ್ಗಸೂಚನೆಗಳ ಬಗ್ಗೆ ತಿಳಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಸತ್‌ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೊ. ರಾಮ್ ಗೋಪಾಲ್ ಯಾದವ್ ವಹಿಸಿದ್ದರು. ಸಭೆಯಲ್ಲಿ ಸಮಿತಿಯ ಸದಸ್ಯರು ಹಾಗೂ ಲೋಕಸಭಾ ಸದಸ್ಯರು ಉಪಸ್ಥಿತರಿದ್ದರು.

error: Content is protected !!