ದೂಡಾ ಸಭೆಯಲ್ಲಿ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ
ದಾವಣಗೆರೆ, ಜ. 22 – ದಾವಣಗೆರೆ ಮತ್ತು ಹರಿಹರ ನಗರಗಳ 5 ವೃತ್ತಗಳನ್ನು ಅಭಿವೃದ್ಧಿಗೊಳಿಸ ಲಾಗುವುದು ಎಂದು ದಾವಣಗೆರೆ-ಹರಿಹರ ನಗರಾ ಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ ನವರ ಆಶಯದಂತೆ ದಾವಣಗೆರೆ ಮತ್ತು ಹರಿಹರ ನಗರಗಳ 5 ಪ್ರಮುಖ ವೃತ್ತಗಳನ್ನು ಮಾದರಿಯಾಗಿ ಅಭಿವೃದ್ದಿ ಮಾಡಲಾಗುವುದು ಎಂದರು.
ಅದೇ ರೀತಿ ನಾಡು ಕಂಡ ಮಹಾನ್ ತತ್ವಜ್ಞಾನಿ ಸರ್ವಜ್ಞ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲು ಸಹ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು. ಈ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಆಯುಕ್ತರಾದ ಹುಲ್ಮನಿ ತಿಮ್ಮಣ್ಣ, ಸದಸ್ಯರುಗಳಾದ ಮಂಜುನಾಥ್, ವಾಣಿ ಬಕ್ಕೇಶ್, ಹರಿಹರ ಜಬ್ಬಾರ್, ಜಾಕೀರ್ ಅಲಿ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.