ದಾವಣಗೆರೆ, ಜ.24- ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ನಿಟುವಳ್ಳಿ ಶಾಖೆಯ ಉದ್ಘಾಟನಾ ಸಮಾರಂಭವು ಬರುವ ಫೆಬ್ರವರಿ 2ರ ಭಾನುವಾರ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬಿ.ಸಿ. ಉಮಾಪತಿ ತಿಳಿಸಿದ್ದಾರೆ.
ನಿಟುವಳ್ಳಿಯ ಹೆಚ್.ಕೆ.ಆರ್. ಸರ್ಕಲ್ ಹತ್ತಿರದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಈ ಶಾಖೆಯನ್ನು ಸ್ಥಾಪಿಸಲಾಗಿದ್ದು, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ.
ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಆಹ್ವಾನ : ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಬ್ಯಾಂಕಿನ ಅಧ್ಯಕ್ಷ ಬಿ.ಸಿ. ಉಮಾಪತಿ, ಉಪಾಧ್ಯಕ್ಷ ಟಿ.ಎಸ್. ಜಯರುದ್ರೇಶ್, ಹಿರಿಯ ನಿರ್ದೇಶಕರೂ ಆಗಿರುವ ಡಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೋಗುಂಡೆ ಬಕ್ಕೇಶಪ್ಪ, ನಿರ್ದೇಶಕರುಗಳಾದ ಪಲ್ಲಾಗಟ್ಟೆ ಶಿವಾನಂದಪ್ಪ, ಎಂ. ಚಂದ್ರಶೇಖರ್, ಕಂಚಿಕೆರೆ ಮಹೇಶ್, ಹೆಚ್.ಎಂ. ರುದ್ರಮುನಿಸ್ವಾಮಿ, ಸೋಗಿ ಮುರುಗೇಶ್, ಪ್ರಧಾನ ವ್ಯವಸ್ಥಾಪಕ ಬಿ.ಎಸ್. ಮಲ್ಲೇಶ್ ಮತ್ತಿತರರು ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎ. ರವೀಂದ್ರನಾಥ್ ಅವರುಗಳನ್ನು ಇಂದು ಭೇಟಿ ಮಾಡಿ ಆಹ್ನಾನಿಸಿದರು.
ಇದೇ ಸಂದರ್ಭದಲ್ಲಿ ವಿಶ್ರಾಂತಿಯಲ್ಲಿರುವ ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎ. ರವೀಂದ್ರನಾಥ್ ಅವರುಗಳ ಯೋಗಕ್ಷೇವನ್ನು ವಿಚಾರಿಸಿದ ಬ್ಯಾಂಕಿನ ಆಡಳಿತ ಮಂಡಳಿಯು ಕುಶಲೋಪರಿ ನಡೆಸಿತು.