ಮಹಿಳಾ ಕಾರ್ಮಿಕರಿಗೆ ವಿಮಾನಯಾನ

ಮಹಿಳಾ ಕಾರ್ಮಿಕರಿಗೆ ವಿಮಾನಯಾನ

ಜಮೀನಿನಲ್ಲಿ ಕೆಲಸ ಮಾಡುವವರಿಗೆ ವಿಮಾನಯಾನ ಉಡುಗೊರೆ ನೀಡಿದ ರೈತ

ಹರಪನಹಳ್ಳಿ, ಫೆ.18- ರೈತರೊಬ್ಬರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದಾರೆ. ಶಿವಮೊಗ್ಗ ಏರ್‌ಪೋರ್ಟ್‌ ನಿಂದ  ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ  ವಿಶ್ವನಾಥ್  ಮೂಲತಃ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು  ಇತ್ತೀಚಿಗೆ ಪೊಲೀಸ್ ಕೆಲಸಕ್ಕೆ ರಾಜನಾಮೇ ನೀಡಿ  ಕೃಷಿಯಲ್ಲಿ ತೊಡಗಿ ಕೊಂಡಿದ್ದರು.  ತಮ್ಮ ಜಮೀನಿಗೆ ಖಾಯಂ ಆಗಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳಾ ಕಾರ್ಮಿಕರಿಗೆ ಏನಾದರೂ ಉಡುಗೊರೆ ಕೊಡಬೇಕು ಎಂದುಕೊಂಡಿದ್ದರು. ಅದರಂತೆ ಎಂದೂ ವಿಮಾನ ಹತ್ತದ ಮಹಿಳಾ ಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದಾರೆ.  ವಿಶ್ವನಾಥ್, ತಮ್ಮ ಜಮೀನಿನಲ್ಲಿ ಕೆಲಸಕ್ಕೆ ಬರುತ್ತಿದ್ದ 10 ಮಹಿಳಾ ಕಾರ್ಮಿಕರಿಗೆ ಹಾಗೂ ತಮ್ಮನ್ನು ಸೇರಿದಂತೆ 11 ಜನರಿಗೆ ವಿಮಾನದಲ್ಲಿ ಗೋವಾಗೆ ಹೋಗಲು ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೆ. ನಂತರ, ಎಲ್ಲ ಕಾರ್ಮಿಕರನ್ನು ತನ್ನೊಂದಿಗೆ ಹತ್ತಿರದ ವಿಮಾನ ನಿಲ್ದಾಣವಾದ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿ, ಗೋವಾ ಪ್ರಯಾಣ ಮಾಡಿಸಿದ್ದಾರೆ.

error: Content is protected !!