ದಾವಣಗೆರೆ, ಫೆ.19- ದಾವಣಗೆರೆ ಮಹಾನಗರ ಪಾಲಿಕೆ ಆಡಳಿತಾಧಿಕಾರಿಯನ್ನಾಗಿ ಬೆಂಗ ಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಮಹಾನಗರ ಪಾಲಿಕೆಯ ಚುನಾಯಿತ ಆಡಳಿತ ಮಂಡಳಿಯ ಅವಧಿಯು ಇಂದು ಮುಕ್ತಾಯ ಗೊಂಡ ಹಿನ್ನೆಲೆಯಲ್ಲಿ ಹೊಸ ಚುನಾ ಯಿತ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವ ತನಕ ಆಡಳಿತಾತ್ಮಕ ಹಿತದೃಷ್ಟಿ ಯಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.