ಕಬ್ಬಡ್ಡಿ ಪಂದ್ಯಾವಳಿ: ಸಚಿವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಬ್ಬಡ್ಡಿ ಪಂದ್ಯಾವಳಿ: ಸಚಿವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ದಾವಣಗೆರೆ, ಮಾ. 2 –  ಪುಟಗನಾಳು ಗ್ರಾಮದಲ್ಲಿ ಮಾರ್ಚ್ 8 ಮತ್ತು 9 ರಂದು ಹಮ್ಮಿಕೊಂಡಿರುವ ಕಬ್ಬಡ್ಡಿ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು   ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಮ್ಮ ಗೃಹ ಕಚೇರಿಯಲ್ಲಿ ಇಂದು ಬಿಡುಗಡೆ ಮಾಡಿದರು. 

ಎಸ್.ಎಸ್.ಎಂ. ಅಭಿಮಾನಿ ಬಳಗ ಹಾಗೂ ಸೇವಾಲಾಲ್ ಯುವಕರ ಸಂಘ (ಪುಟಗನಾಳು) ಇವರ ಆಶ್ರಯದಲ್ಲಿ ಸಂತ ಸೇವಾ ಲಾಲ್ ಮಹಾರಾಜರ 286ನೇ ಜಯಂತೋತ್ಸವ ಅಂಗವಾಗಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ನಡೆಯಲಿದ್ದು, ಕಬ್ಬಡಿ ಕ್ರೀಡಾ ಕೂಟವು ಯಶಸ್ವಿಯಾಗಿ ಜರುಗಲಿ ಎಂದು ಸಚಿವರು ಶುಭ ಹಾರೈಸಿದರು.   ಈ ವೇಳೆ ಕಾಂಗ್ರೆಸ್ ಮುಖಂಡರಾದ ಮಾಗಾನಹಳ್ಳಿ ಪರಶುರಾಮ್, ಬೂದಾಳ್ ಬಾಬು, ಶಶಿನಾಯ್ಕ್ ಪುಟಗನಾಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!