ಪ್ರಥಮ ಪತ್ರಿಕೆ ಕನ್ನಡ ವಿಷಯಕ್ಕೆ 264 ವಿದ್ಯಾರ್ಥಿಗಳು ಗೈರು
ದಾವಣಗೆರೆ, ಮಾ. 21- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಭಾರಂಭಗೊಂಡಿದೆ.
ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 20,674 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 9,785 ಬಾಲಕರು ಮತ್ತು 10,625 ಬಾಲಕಿಯರು ಸೇರಿದ್ದಾರೆ.
ಮೊದಲ ದಿನವಾದ ಇಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಒಟ್ಟು 264 ವಿದ್ಯಾರ್ಥಿಗಳು ಗೈರುಹಾಜರಾಗಿ ದ್ದಾರೆ. ಇದರಲ್ಲಿ 150 ಬಾಲಕರು ಮತ್ತು 114 ಬಾಲಕಿ ಯರು ಸೇರಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಪಾರದರ್ಶಕ ವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರ ಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾ ಪಂಚಾಯ್ತಿ ಸಿಇಒ ಸುರೇಶ್ ಬಿ.ಇಟ್ನಾಳ್, ಡಿಡಿಪಿಐ ಕೊಟ್ರೇಶ್ ಅವರು ಮೋತಿ ವೀರಪ್ಪ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.