ದಾವಣಗೆರೆ, ಮಾ.27- ಜಿಲ್ಲೆಯ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.
ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ದುಸ್ಥಿತಿ ಬಗ್ಗೆ ವಿವರಿಸಿದ ಅವರು, ಮೇಲ್ಛಾವಣಿ ಶಿಥಿಲಗೊಂಡಿದ್ದು, ಮಳೆಗಾಲ ದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಆಧುನಿಕ ಸೌಲಭ್ಯಗಳೊಂದಿಗೆ ಹೊಸ ಆಸ್ಪತ್ರೆ ನಿರ್ಮಾ ಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಹಳೆ ದಾವಣಗೆರೆಯ ಹೆರಿಗೆ ಆಸ್ಪತ್ರೆಯಲ್ಲಿ ಸ್ಥಳಾವಕಾಶ ಮತ್ತು ಹಾಸಿಗೆಗಳ ಕೊರತೆ ಇದೆ. 700-800 ಹಾಸಿಗೆಗಳ ಸಾಮರ್ಥ್ಯದ ನೂತನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮನವಿ ಮಾಡಿದರು. ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೂ ಹೈಟೆಕ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಈ ಮನವಿಗೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.