ರಸಗೊಬ್ಬರ ಕೊರತೆ ಆಗದಂತೆ ಎಚ್ಚರ ವಹಿಸಲು ಸೂಚನೆ

 ಹೊನ್ನಾಳಿ, ಮೇ 5- ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಕೊರತೆ ಆಗದಂತೆ ಎಚ್ಚರ ವಹಿಸಬೇಕೆಂದು ಕೃಷಿ ನಿರ್ದೇಶಕರಾದ ಶ್ರೀಮತಿ ನಂದಿನಿ ಸೂಚಿಸಿದರು. ತಾಲ್ಲೂಕು ಪಂಚಾಯತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ಕೃಷಿ ಪರಿಕರ ಮಾರಾಟಗಾರರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್‍  ಸಭೆಯನ್ನು ಉದ್ದೇಶಿಸಿ ಮಾತನಾಡಿ ಮುಂಗಾರು ಹಂಗಾಮಿನ ಪೂರ್ವ ಸಿದ್ದತೆ ಅನ್ವಯ  ರಸಗೊಬ್ಬರದ ಬೇಡಿಕೆಗೆ ಅನುಗುಣವಾಗಿ ಪೂರೈಕೆಯಾಗುವ  ರಸಗೊ ಬ್ಬರವನ್ನು ತಾಲ್ಲೂಕು ವ್ಯಾಪ್ತಿಯ ರೈತರಿಗೆ ಪಿ.ಓ.ಎಸ್ ಮುಖಾಂತರ ಬೆಳೆವಾರು ಪ್ರಮಾಣ ನೀಡುವಿಕೆಗೆ ಹೆಚ್ಚಿನ ಒತ್ತು ನೀಡುವುದು ಅತಿ ಅವಶ್ಯಕ ಅಂಶವಾಗಿ ರುತ್ತದೆ.  ಇತರೆ ತಾಲ್ಲೂಕು ಮತ್ತು  ಜಿಲ್ಲೆಗಳಿಗೆ  ನೀಡು ವುದನ್ನು  ಸಂಪೂರ್ಣವಾಗಿ ಪ್ರತಿಬಂಧಿಸಬೇಕೆಂದು  ಮಾರಾಟಗಾರರಿಗೆ ಸೂಚಿಸಿದರು. 

ಉಪ ಕೃಷಿ ನಿರ್ದೇಶಕರಾದ ಹಂಸವೇಣಿ ಮಾತ ನಾಡಿ, ಕಳೆದ ಸಾಲಿನಲ್ಲಿ ರಸಗೊಬ್ಬರ ನಿಯಂತ್ರಣವನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದು, ಈ ವರ್ಷ ದಾಸ್ತಾನು ನಿರ್ವಹಣೆ ಮತ್ತು ರಸಗೊಬ್ಬರ ಕೊರತೆಯಾಗದ ರೀತಿ ಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ತಿಳಿಸಿದರು. 

ಸಹಾಯಕ ಕೃಷಿ ನಿರ್ದೇಶಕರು (ಜಾಗೃತ ದಳ) ಗೋವರ್ಧನ್‍ ಮಾತನಾಡಿ ಕೃಷಿ ಪರಿಕರ ಮಾರಾಟಗಾರರಿಗೆ ರಸಗೊಬ್ಬರ ನಿಯಂತ್ರಣ ಆದೇಶ, ಬೀಜ ಕಾಯ್ದೆ ಮತ್ತು ಬೀಜ (ನಿಯಂತ್ರಣ) ಆದೇಶ ಹಾಗೂ ಕೀಟನಾಶಕ ಕಾಯ್ದೆ ಬಗ್ಗೆ ವಿಸ್ತಾರವಾಗಿ ತಿಳಿಸಿದರು.  ಕೃಷಿ ಪರಿಕರ ಮಾರಾಟಗಾರರ ಸಂಘದ ಪ್ರತಿನಿಧಿ ವಾಗೀಶ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಪರಿಕರ ಮಾರಾಟದಲ್ಲಿ ಯಾವುದೇ ವ್ಯತ್ಯಾಸವಾಗದಂತೆ  ಅಚ್ಚು ಕಟ್ಟಾಗಿ ನಿರ್ವಹಣೆ ಮಾಡುತ್ತೇವೆ ಎಂದು ತಿಳಿಸಿದರು. 

ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಸಿ.ಟಿ. ಸುರೇಶ್, ಕೃಷಿ ಅಧಿಕಾರಿ (ತಾಂತ್ರಿಕ), ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು ಮತ್ತು ಆತ್ಮ ಸಿಬ್ಬಂದಿ ಹಾಜರಿದ್ದರು.

error: Content is protected !!