ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಲೇಬೆನ್ನೂರು, ಜ.3- ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಇಲ್ಲಿನ ಮಾಲತೇಶ ಪಬ್ಲಿಕ್ ಸ್ಕೂಲ್‌ನ 15 ರಿಂದ 18 ವರ್ಷ ದೊಳಗಿನ 30 ವಿದ್ಯಾರ್ಥಿಗಳಿಗೆ ಸೋಮವಾರ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು.  ಹಾಲಿವಾಣ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾ. ಪಂ ಅಧ್ಯಕ್ಷ ಐ.ಪಿ. ರಂಗನಾಥ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿ ಡಾ. ಲಕ್ಷ್ಮಿದೇವಿ ಅವರು ಲಸಿಕೆ ಹಾಕಿಸಿಕೊಳ್ಳಲು ವಿದ್ಯಾರ್ಥಿಗಳಾಗಲೀ ಅಥವಾ ಪೋಷಕರಾಗಲೀ ಭಯಪಡಬೇಡಿ ಎಂದರು. ಈ ವೇಳೆ 9 ಮತ್ತು 10ನೇ ತರಗತಿಯ 45 ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಯಿತು.

ಎಸ್‌ ಡಿ ಎಂ ಸಿ ಅಧ್ಯಕ್ಷ ತಿಪ್ಪಣ್ಣ, ಶಾಲಾಮುಖ್ಯ ಶಿಕ್ಷಕ ಹನುಮಂತಪ್ಪ, ಗ್ರಾ.ಪಂ. ಬಿಲ್ ಕಲೆಕ್ಟರ್ ಡಿ. ರೇವಣಪ್ಪ, ಆರೋಗ್ಯ ಇಲಾಖೆಯ ಕಿರಣ್ ಕಾಜಲ್ ಮತ್ತಿತರರು ಈ ವೇಳೆ ಹಾಜರಿದ್ದರು.

error: Content is protected !!