ಮಾಗನೂರು ಬಸಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ

ದಾವಣಗೆರೆ, ಜ.3- ನಗರದ ಮಾಗನೂರು ಬಸಪ್ಪ ಪಿಯು ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಆರೋಗ್ಯಾಧಿಕಾರಿ ಡಾ. ಎಸ್.ಎಂ. ರಾಘವೇಂದ್ರ ಅವರು ಉದ್ಘಾಟನೆ ಮಾಡಿ, 28 ದಿನಗಳ ಅಂತರದಲ್ಲಿ 2ನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವರಾಜು ಎಂ. ಸಾಮಾಜಿಕ ಕಾರ್ಯಕರ್ತ ಬಿ. ದಿಳ್ಯಪ್ಪ, ಮುಖ್ಯೋಪಾಧ್ಯಾಯ ಎಸ್. ಆರ್.ಶಿರಗಂಬಿ, ಕಾಲೇಜಿನ ನಿರ್ದೇಶಕ ಡಾ. ಜಿ.ಎನ್.ಹೆಚ್. ಕುಮಾರ್, ಪ್ರಾಚಾರ್ಯ ಡಾ. ಪ್ರಸಾದ್ ಬಂಗೇರ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಉಪನ್ಯಾಸಕ ವರ್ಗ, ಬೋಧಕೇತರ ವರ್ಗ ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

error: Content is protected !!