ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕಡ್ಡಾಯವಾಗಿ ಲಸಿಕೆ ಹಾಕಿಸಿ

ಜಗಳೂರು, ಜ.3-  ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಶಾಸಕ ಎಸ್.ವಿ. ರಾಮಚಂದ್ರ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರ ಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಅಭಿ ಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಂದುವರೆದ ಅನೇಕ ರಾಷ್ಟ್ರಗಳಲ್ಲಿ ಕೋವಿಡ್ ಮಹಾಮಾರಿಯನ್ನು ನಿಯಂತ್ರಿ ಸಲು ಸಾಧ್ಯವಾಗುತ್ತಿಲ್ಲ. ಆದರೆ ಭಾರತ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ನಿಯಂತ್ರಣಕ್ಕೆ ಹಲ ವಾರು ಕ್ರಮ  ಕೈಗೊಂಡಿದ್ದಾರೆ ಎಂದರು.

ಮಕ್ಕಳಿಗೂ  ಉಚಿತವಾಗಿ ಲಸಿಕೆ ನೀಡುವ ಸರ್ಕಾರದ  ಕ್ರಮ ಮಹತ್ವದ್ದಾಗಿದ್ದು, ಪೋಷಕರು  ಭಯಪಡದೆ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 5 ಕೋಟಿ ರೂ.  ವೆಚ್ಚದಲ್ಲಿ 40 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಶೌಚಾಲಯ ನಿರ್ಮಿಸಲು ವಿಶೇಷ ಅನುದಾನ ಕಲ್ಪಿಸಿಕೊಡುವುದಾಗಿ  ಶಾಸಕರು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ನಾಗರಾಜ್, ತಾಲ್ಲೂಕಿನಾದ್ಯಂತ 10 ಪ್ರೌಢಶಾಲೆಗಳಲ್ಲಿ 15 -18 ವಯಸ್ಸಿನ ಮಕ್ಕಳಿಗೆ ಉಚಿತ ಕೋವ್ಯಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 28 ದಿನಗಳ ಅಂತರದಲ್ಲಿ ಎರಡನೇ ಡೋಸ್ ನೀಡಲಾಗುವುದು ಎಂದರು.

 5,664 ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ 2,657 ಪಿಯುಸಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8,345 ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೋಷಕರ ಒಪ್ಪಿಗೆ ಪಡೆದುಕೊಂಡೇ ಲಸಿಕೆ ನೀಡಲಾಗುವುದು ಎಂದರು.

ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಮಂಜಮ್ಮ ಮಾತನಾಡಿ, ಈ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದು ಬೇಸರದ ಸಂಗತಿ. ಶಾಸಕರು ತಕ್ಷಣವೇ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡರು.

 ತಾಲ್ಲೂಕು ದಂಡಾಧಿಕಾರಿ ಸಂತೋಷ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ಪ್ರಾಂಶುಪಾಲ ಹಾಲಪ್ಪ, ಬಿ.ಆರ್.ಸಿ. ಗಿರೀಶ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಎಸ್. ಸಿದ್ದಪ್ಪ, ಸದಸ್ಯರಾದ ತಿಪ್ಪೇರುದ್ರಸ್ವಾಮಿ,  ಪಾಪ ಲಿಂಗಪ್ಪ, ದೇವರಾಜ್, ಬಿ.ಪಿ. ಸುಭಾನ್ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.

ಸಮಾರಂಭಕ್ಕೂ ಮುನ್ನ  ಸಾವಿತ್ರಿ ಬಾ ಪುಲೆ ಜಯಂತ್ಯುತ್ಸವ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕರು ನಮನ ಸಲ್ಲಿಸಿದರು.

error: Content is protected !!