ದಾವಣಗೆರೆ, ಜ.7- ಅಪ್ಪ ಬೆಳವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಮಗಳು ದಾವಣ ಗೆರೆ ಮಹಾನಗರ ಪಾಲಿಕೆ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ.
ಬೆಳವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ತುರ್ಚಘಟ್ಟ ಗ್ರಾಮದ ದಾಸರ ಶೇಖರಪ್ಪ ಅವರು ಬೆಳವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಬೆಳವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುರ್ಚಘಟ್ಟ ಗ್ರಾಮದಲ್ಲಿ ಪಂಚಾಯಿತಿ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ಶೇಖರಪ್ಪ ಅವರ ಮಗಳು ಶ್ರೀಮತಿ ಡಿ.ಎಸ್. ಉಮಾ ಪ್ರಕಾಶ್ ದಾವಣಗೆರೆ ಮಹಾನಗರ ಪಾಲಿಕೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ದ್ದಾರೆ. 2009ರಲ್ಲಿ ಮಹಾನಗರ ಪಾಲಿಕೆ ಮಹಾಪೌರರಾಗಿದ್ದರು.