ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ವ್ಯಕ್ತಿಗಳಾಗಿ ರೂಪಿಸಬೇಕಾಗಿದೆ : ಶ್ವೇತ ಮರಿಗೌಡರ್

ಜಿಎಂಎಸ್‌ನಲ್ಲಿ  ಫ್ರೆಶರ್ಸ್ ಡೇ

ದಾವಣಗೆರೆ, . 14 – ನಗರದ ಜಿಎಂಎಸ್ ಅಕ್ಯಾಡಮಿ ಫಸ್ಟ್ ಗ್ರೇಡ್ ಕಾಲೇಜ್ನಲ್ಲಿ ಕಿರಿಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಫ್ರೆಶರ್ಸ್ ಡೇ ಆಚರಿಸಲಾಯಿತು.

ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹೊಸತಾಗಿ ಬಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಕೋರುತ್ತಾ, ಬರಮಾಡಿಕೊಳ್ಳುವ ಪರಿಚಯ್-2022″ ಕಾರ್ಯಕ್ರಮ ವಿದ್ಯಾರ್ಥಿಗಳು ವಿವಿಧ ಉಡುಗೆ ತೊಡುಗೆಗಳಲ್ಲಿ ಕಂಗೊಳಿಸಿದ್ದರು.

ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಜಿಎಂಐಟಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಸಂಜಯ್ ಪಾಂಡೆ, ಅತ್ಯುತ್ತಮವಾದ ಬೋಧನಾ ಸಂಪನ್ಮೂಲಗಳು, ಪ್ರಾಯೋಗಿಕ ಮಾನ್ಯತೆ ಮತ್ತು ತರಬೇತಿ ವಿಧಾನಗಳೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು

ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಮರಿಗೌಡರ್ ಮಾತನಾಡಿ, ಫ್ರೆಶರ್ಸ್ ಡೇ ಜೀವನದ ಹೊಸ ಪ್ರಯಾಣದ ಆರಂಭ. ಹೊಸ ಬ್ಯಾಚ್ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಇದನ್ನು ಸಾಮಾನ್ಯವಾಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಆಚರಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಟ್ಟು, ಅವರುಗಳನ್ನು ಜವಾಬ್ದಾರಿಯುತ ವ್ಯಕ್ತಿಯನ್ನಾಗಿ ರೂಪಿಸುವ ಭಾರ ನಮ್ಮ ಮೇಲೆ ಇದೆ ಎಂದು ತಿಳಿಸಿದರು

ಇದೇ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಎಕ್ಸ್ ಸಿಯೆನ್ಸಿಯಾ ಕಂಪನಿಯ ನಿರ್ದೇಶಕ ಮಹಮ್ಮದ್ ಯಾಸೀನ್, ಜಿ.ಎಂ.ಹೆಚ್. ಕಾಲೇಜಿನ ಪ್ರಾಂಶುಪಾಲ ಡಾ ವೆಂಕಟರಾಯುಡು, ಸಹ ಆಡಳಿತ ಅಧಿಕಾರಿ ಶಿವಕುಮಾರ್, ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗಾಧಿಕಾರಿ ಟಿ.ಆರ್. ತೇಜಸ್ವಿ ಕಟ್ಟಿಮನಿ ಮತ್ತಿತರರು ಪಾಲ್ಗೊಂಡಿದ್ದರು.

error: Content is protected !!