ಬೆಂಗಳೂರು, ಜ.18-ದಾವ ಣಗೆರೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕುರಿತಂತೆ ಹಾಗೂ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿರುವ ದಾವಣಗೆರೆ ಜಿಲ್ಲೆಯ ಯೋಜನೆಗಳ ಬಗ್ಗೆ ವಿಧಾನಸೌಧದಲ್ಲಿ ಇಂದು ಸುದೀರ್ಘ ಚರ್ಚೆ ನಡೆಯಿತು.
ದಾವಣಗೆರೆ ಜಿಲ್ಲಾ ಉಸ್ತು ವಾರಿ ಸಚಿವ ಭೈರತಿ ಬಸವರಾಜ್ ಅಧ್ಯಕ್ಷತೆಯಲ್ಲಿ ಅವರ ಕಚೇರಿಯಲ್ಲಿ ಏರ್ಪಾಡಾಗಿದ್ದ ಈ ಸಭೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ವಿವಿಧ ಯೋಜನೆಗಳ ಕುರಿತಂತೆ ಪ್ರಸ್ತಾಪಿಸಿ ಸಚಿ ವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಗಳೂ ಸಹ ದಾವಣಗೆರೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಂಸದರೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಶ್ರೀಮತಿ ಎಂ.ಎಸ್.ಅರ್ಚನಾ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎನ್. ಶಶಿಕುಮಾರ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಅಭಿಯಂತರ ಸತ್ಯನಾರಾಯಣ, ದಾವಣಗೆರೆ ಮಹಾನಗರ ಪಾಲಿಕೆ ಮತ್ತು ದೂಡಾ ಆಯುಕ್ತರು ಸೇರಿದಂತೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.