ಮೀಸಲಾತಿ ಹೆಚ್ಚಳದ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು

ಜಗಳೂರಿನ ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ

ಜಗಳೂರು, ಜ.19- ರಾಜ್ಯದಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕವಾ ಗಿರುವ  ವಾಲ್ಮೀಕಿ ಸಮುದಾಯಕ್ಕೆ ಅಗತ್ಯ ಮೀಸ ಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ವಾಲ್ಮೀಕಿ ಜಾತ್ರಾ ಉತ್ಸವದ ಪೋಸ್ಟರ್ ಬಿಡುಗಡೆ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ವಾಲ್ಮೀಕಿ ಜಾತ್ರಾ ಉತ್ಸವದ  ಅಂಗವಾಗಿ ರಾಜ್ಯದ 156 ತಾಲ್ಲೂಕುಗಳಲ್ಲಿ ಇದುವರೆಗೆ ಪ್ರವಾಸ ಕೈಗೊಳ್ಳಲಾಗಿದ್ದು,  ಸಮುದಾಯದ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಬರುವ ಫೆಬ್ರವರಿ 8 ಮತ್ತು 9 ರಂದು ಹರಿಹರ ತಾಲ್ಲೂಕಿನ ರಾಜನಹಳ್ಳಿ ಗುರುಪೀಠ ದಲ್ಲಿ  ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದೆ. ಮಠದ 24ನೇ ವಾರ್ಷಿಕೋತ್ಸವ, ಶ್ರೀ ಪುಣ್ಯಾನಂದ ಪುರಿ ಸ್ವಾಮೀಜಿಯವರ 15ನೇ ವರ್ಷದ ಪುಣ್ಯಾ ರಾಧನೆ ಹಾಗೂ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರ 14ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ರಥದ ಲೋಕಾ ರ್ಪಣೆ ಸಮಾರಂಭವನ್ನು ಜಾತ್ರಾ ಉತ್ಸವದಲ್ಲಿ ಹಮ್ಮಿಕೊಳ್ಳಲಾಗುವುದು ಸ್ವಾಮೀಜಿ ವಿವರಿಸಿದರು.

ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ರಾಜ್ಯದ ಶೋಷಿತ ಸಮುದಾಯದ ಸಂಘಟನೆಗೆ ವಾಲ್ಮೀಕಿ ಶ್ರೀಗಳು ಶ್ರಮಿಸುತ್ತಿದ್ದಾರೆ. ನಾಡಿನಲ್ಲಿ ಅತ್ಯಂತ ಅರ್ಥಪೂರ್ಣ ಉತ್ಸವ ಎನಿಸಿರುವ ವಾಲ್ಮೀಕಿ ಜಾತ್ರೆಯ ಯಶಸ್ವಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಅವರನ್ನು ವಾಲ್ಮೀಕಿ ಜಾತ್ರೆ ಉತ್ಸವ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಈ  ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

ಮುಖಂಡರಾದ ಕೆ.ಪಿ. ಪಾಲಯ್ಯ, ಸೂರಲಿಂಗಪ್ಪ, ಕಾನನಕಟ್ಟೆ ಪ್ರಭು, ಬಿಸ್ತುವಳ್ಳಿ ಬಾಬು, ಲೊಕೇಶ್, ರೇವಣ್ಣ ನಿಜಲಿಂಗಪ್ಪ, ಪಿ. ಓಬಣ್ಣ, ಎನ್.ಜೆ. ತಿಪ್ಪೇಸ್ವಾಮಿ, ಅರವಿಂದ ಪಾಟೀಲ್  ಮಾರುತಿ ಮತ್ತಿತರರಿದ್ದರು.

error: Content is protected !!