ಉಚಿತ ಅಂಬ್ಯುಲೆನ್ಸ್ ಸೇವೆಗೆ ಚಾಲನೆ

ಮಲೇಬೆನ್ನೂರು, ಜ.21- ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಅಭಿಮಾನಿ ಬಳಗದ ಉಚಿತ ಸ್ಯಾನಿಟೈಜ್ ಸಿಂಪರಣೆ ಮತ್ತು ಉಚಿತ ಅಂಬ್ಯುಲೆನ್ಸ್ ಸೇವೆಗೆ ಜಿ.ಪಂ. ಮಾಜಿ ಸದಸ್ಯ ಬಿ.ಎಂ.ವಾಗೀಶ್ ಸ್ವಾಮಿ ಚಾಲನೆ ನೀಡಿದರು.

ನಂತರ ಮಾತನಾಡಿ ವಾಗೀಶ್ ಸ್ವಾಮಿ ಅವರು, ಕೊರೊನಾ ಮೊದಲನೇ ಹಾಗೂ ಎರಡನೇ ಅಲೆ ಬಂದ ಸಂದರ್ಭದಲ್ಲಿ ಹರಿಹರ ತಾಲ್ಲೂಕಿನಲ್ಲಿ ಚಂದ್ರಶೇಖರ್ ಪೂಜಾರ್ ಸೇರಿದಂತೆ ಅನೇಕರು ಜನರಿಗೆ ಅಗತ್ಯವಿರುವ ಸೇವೆ ಸಲ್ಲಿಸಿದ್ದಾರೆ. ಈಗ ಮತ್ತೆ 3ನೇ ಅಲೆ ಪ್ರಾರಂಭವಾಗಿದ್ದು, ಜನರಿಗೆ ತುರ್ತು ಸೇವೆ ಒದಗಿಸುವ ಅಂಬ್ಯುಲೆನ್ಸ್ ಸೇವೆ ಆರಂಭಿಸಿರುವುದು ಶ್ಲ್ಯಾಘನೀಯ ಎಂದರು.

ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ರುಕ್ಮಿಣಿ ಮಾತನಾಡಿ, ಸ್ವಚ್ಛತೆಗೆ ಒತ್ತು ನೀಡಿರುವುದು ಸ್ವಾಗತಾರ್ಹ ಸೇವೆ ಎಂದರು.

ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಮಾತನಾಡಿ, ಜನರಿಗೆ ಅಗತ್ಯ ಸೇವೆ ಒದಗಿಸಲು ಬದ್ಧನಾಗಿದ್ದೇನೆ. ಈ ನಿಟ್ಟಿನಲ್ಲಿ ಈಗ ತುರ್ತು ಸೇವೆಗಾಗಿ ಅಂಬ್ಯುಲೆನ್ಸ್ ಬಿಟ್ಟಿದ್ದೇವೆ. ನಗರ, ಪಟ್ಟಣ, ಹಳ್ಳಿಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಉಚಿತವಾಗಿ ಸ್ಯಾನಿಟೈಜ್ ಸಿಂಪರಣೆ ಮಾಡುತ್ತೇವೆ ಎಂದರು.

ಪುರಸಭೆ ಸದಸ್ಯ ಬಿ.ಮಂಜುನಾಥ್, ಪಿ.ಆರ್.ರಾಜು, ಎ.ಕೆ.ಲೋಕೇಶ್, ಮಾಜಿ ಸದಸ್ಯ ಬಿ.ಸುರೇಶ್, ಆನಂದಚಾರ್, ದೀಟೂರು ನಿರಂಜನ್ ಸೇರಿದಂತೆ ಇನ್ನೂ ಅನೇಕರು ಈ ವೇಳೆ ಹಾಜರಿದ್ದರು.

error: Content is protected !!