ಹೆಣ್ಣು ಮಗುವಿಗೆ ಸಮಾನ ಅವಕಾಶ ಕಲ್ಪಿಸುವ ಚಿಂತನೆ ಅಗತ್ಯ : ಎಂ.ಜಿ.ಬಸವನಗೌಡ

ರಾಘವೇಂದ್ರ ಕಾಲೇಜಿನಲ್ಲಿ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ ಕಾರ್ಯಕ್ರಮ 

ದಾವಣಗೆರೆ, ಜ. 28- ಹೆಣ್ಣು ಮಗುವಿನ ವಿರುದ್ಧ ನಡೆಯುತ್ತಿರುವ ತಾರತಮ್ಯವನ್ನು ಕಡ್ಡಾಯ ವಾಗಿ ತಿರಸ್ಕರಿಸಿ, ಹೆಣ್ಣು ಮಗುವಿಗೆ ಸಮಾಜದಲ್ಲಿ ಸಮಾನ ಅವಕಾಶವನ್ನು ಕಲ್ಪಿಸಿ ಕೊಡುವಲ್ಲಿ ಚಿಂತನೆ ನಡೆಸಬೇಕಾದ ಅಗತ್ಯವಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.  

ನಗರದ ರಾಘವೇಂದ್ರ ಹೈಟೆಕ್ ಪಿಯು ಕಾಲೇಜಿನಲ್ಲಿ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ ಹಾಗೂ ಶ್ರೀ ಶಾರದಾ ಮೆಡಿಕಲ್ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಹಾಗೂ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಗೆ ಸ್ಥಾನಮಾನ ನೀಡುವ ಮೂಲಕ ಲಿಂಗ ತಾರತಮ್ಯ ಹೋಗಲಾಡಿಸುವ ಅಗತ್ಯವಿದೆ ಎಂದು ಹೇಳಿದರು.  ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ಪ್ರಧಾನ ಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಈ ದಿನದಂದು ದೇಶದ ಹೆಣ್ಣು ಮಕ್ಕಳನ್ನು ಗೌರವಿಸುತ್ತಿರುವುದಕ್ಕೆ ಅತೀವ ಸಂತಸವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶು ಪಾಲ ಡಾ. ಅನಿಲ್ ಕುಮಾರ್ ಶ್ಯಾಗಲೆ ಮಾತನಾಡಿ, ಇಂದು ಶಿಕ್ಷಣ ಕ್ಷೇತ್ರ ದಲ್ಲಿ ಹುಡುಗಿಯರದ್ದೇ ಮೇಲಗೈ. ಶೈಕ್ಷಣಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿ, ಸಾಮಾಜಿಕ ಕ್ಷೇತ್ರದಲ್ಲಿ ಇಂದು ಮಹಿಳೆ ಪುರುಷರಿಗೆ ಸಮಾನವಾಗಿ ಯಶಸ್ಸು ಗಳಿ ಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.  ತಾಯಿಯಾಗಿ, ಸೋದರಿಯಾಗಿ, ಹೆಂಡತಿಯಾಗಿ, ಮಗಳಾಗಿ ಸಂಸಾರದ ನೊಗವನ್ನು ಎಳೆಯುವಲ್ಲಿ ಮಹಿಳೆಯ ಪಾತ್ರ ದೊಡ್ಡದೆಂದು ತಿಳಿಸಿದರು.   

ಕೇಂದ್ರದ ಯೋಜನೆಗಳಾದ ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯಾ ಸಮೃದ್ಧಿ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಕೇಂದ್ರದ ಗೃಹ ವಿಜ್ಞಾನಿ ಡಾ. ಸುಪ್ರಿಯಾ ಪಿ. ಪಾಟೀಲ್ ನೀಡಿದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಉಪನ್ಯಾಸಕರಾದ ಶ್ರೀಮತಿ ಲೀನಾ ಮೇಡಂ ಮತ್ತು ಪಿ.ಎಂ. ಇಂದುಶ್ರೀ ಅವರಿಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಬಸವರಾಜ, ಹರೀಶ್, ಯಶಸ್ವಿನಿ ಹಿರೇಮಠ, ವಿಶ್ವನಾಥ್, ನಮಿತಾ ಹಾಗೂ ಮತ್ತಿತರಿದ್ದರು.

error: Content is protected !!