ಹರಿಹರ, ಫೆ. 10 – ಮೊನ್ನೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮಾಜಿ ಶಾಸಕ ಬಿ.ಪಿ. ಹರೀಶ್ ಒತ್ತಾಯಿಸಿದ್ದಾರೆ.
ಹಲ್ಲೆಗೆ ಗುರಿಯಾದ ಮುತ್ತುರಾಜ್ ಮತ್ತಿತರರ ಮನೆಗಳಿಗೆ ಭೇಟಿ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಶಾಂತಿಯುತ ಜೀವನಕ್ಕೆ ಪೊಲೀಸ್ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಅಜಿತ್ ಸಾವಂತ್, ದೂಡಾ ಮಾಜಿ ಸದಸ್ಯ ರಾಜು ರೋಖಡೆ, ಶಿವಪ್ರಕಾಶ್ ಶಾಸ್ತ್ರಿ, ವರಪ್ರಸಾದ್, ಅಗಡಿ ಮಂಜುನಾಥ್, ರವಿಕುಮಾರ್ ಮತ್ತಿತರರು ಹಾಜರಿದ್ದರು.