ಮಲೇಬೆನ್ನೂರು, ಹರಿಹರ ಗಲಭೆ: ಕ್ರಮಕ್ಕೆ ಶ್ರೀರಾಮ ಸೇನಾ ಆಗ್ರಹ

ದಾವಣಗೆರೆ, ಫೆ.11- ಮಲೇಬೆನ್ನೂರು, ಹರಿಹರ ಹಾಗೂ ನಲ್ಲೂರಿನಲ್ಲಿ ನಡೆದ ಗಲಭೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದಲ್ಲಿ ಇಂದು ಶ್ರೀರಾಮ ಸೇನಾ ಕರ್ನಾಟಕ ಜಿಲ್ಲೆ ಮತ್ತು ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ್ದ ಸಂಘಟನೆಯ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. 

ಗಲಭೆಯಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ನೀಡಬೇಕು. ಕೆಲವು ಮುಗ್ಧ ಜನರ ಮೇಲೆ ಪ್ರಕರಣ ದಾಖಲಿಸಿದ್ದು, ಸತ್ಯಾಸತ್ಯತೆ ಅರಿತು ಪ್ರಕರಣ ವಜಾಗೊಳಿಸಬೇಕು. ಹಲ್ಲೆಗೊಳಗಾದವವರಿಗೆ ಹಾಗೂ ಅವರ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. 

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಜಿಲ್ಲಾಧ್ಯಕ್ಷ ಮಣಿಸರ್ಕಾರ್, ರಾಜ್ಯ ಸಂಪರ್ಕ ಪ್ರಮುಖ್ ಪರಶುರಾಮ್ ನಡುಮನಿ ಸೇರಿದಂತೆ ಇತರರು ಇದ್ದರು.

error: Content is protected !!