ಹರಿಹರ, ಫೆ. 11 – ಹೊರವಲಯದ ಅಮರಾವತಿಯಲ್ಲಿ ನೂತನವಾಗಿ ನಿರ್ಮಿಸಿದ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಪಂಚಮುಖಿ ಮಹಾ ಗಣಪತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ದೇವಾಲಯವನ್ನು ಉದ್ಘಾಟಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ನಗರಸಭಾ ಸದಸ್ಯರಾದ ಎ.ಬಿ.ವಿಜಯಕುಮಾರ್, ನಂದಿಗಾವಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್, ಎ.ಬಿ.ನಾಗರಾಜ್, ಹೆಚ್.ನಾಗರಾಜ್, ಯೋಗೇಶ್, ಪ್ರಭು, ಹೆಚ್.ಬಿ.ನಾಗರಾಜ್, ಎ.ಬಿ.ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.