ಚನ್ನಗಿರಿ, ಫೆ. 17- ಕನ್ನಡದ ಸಮನ್ವಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಪ್ರಯುಕ್ತ ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ನಿವೃತ್ತ ನೌಕರರ ಭವನದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪಾಂಡೋಮಟ್ಟಿ ವಿರಕ್ತಮಠದ ಡಾ. ಶ್ರೀ ಗುರುಬಸವ ಮಹಾಸ್ವಾಮೀಜಿ ವಹಿಸಿದ್ದರು. ಚನ್ನಗಿರಿ ಕಸಾಪ ಅಧ್ಯಕ್ಷ ಬಸವಾಪಟ್ಟಣದ ಎಲ್.ಜಿ.ಮಧುಕುಮಾರ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ನಿಕಟಪೂರ್ವ ಕಸಾಪ ಅಧ್ಯಕ್ಷ ಎಂ.ಯು. ಚನ್ನಬಸಪ್ಪ, ಕಾರ್ಯದರ್ಶಿ ಎಂ.ಎಸ್. ಬಸವನಗೌಡ, ಕೋಶಾ ಧ್ಯಕ್ಷ ಬಿ.ಇ. ಸಿದ್ದಪ್ಪ, ನಿರ್ದೇಶಕರಾದ ಟಿ.ವಿ.ಚಂದ್ರಣ್ಣ ಪಾಂಡೋಮಟ್ಟಿ, ಬಾರಾ ಮಹೇಶಣ್ಣ, ನಿವೃತ್ತ ನೌಕರರ ಸಂಘದ ಜಂಟಿ ಕಾರ್ಯದರ್ಶಿಗಳಾದ ಜಿ.ಚಿನ್ನಸ್ವಾಮಿ, ಗಂಗಾ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.