ಹರಪನಹಳ್ಳಿ, ಫೆ.21- ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮಾಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ಹಳೇ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಹೊಸಪೇಟೆ ರಸ್ತೆ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ಆಗಮಿಸಿ, ಬಹಿರಂಗ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಟಿ.ಭರತ್ ಮಾತನಾಡಿ, ಈಶ್ವರಪ್ಪನವರ ಹೇಳಿಕೆ ದೇಶ ದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜ ನಮ್ಮ ದೇಶದ ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ ಎಂದು ಹೇಳಿದರು.
ಮುಖಂಡ ಶಶಿಧರ್ ಪೂಜಾರ್, ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಬಿ.ಪರಶುರಾಮಪ್ಪ, ಪುರಸಭಾ ಮಾಜಿ ಅಧ್ಯಕ್ಷ ಹೆಚ್.ಕೆ.ಹಾಲೇಶ್, ಚಿ
ಗಟೇರಿ ಬ್ಲಾಕ್ ಅಧ್ಯಕ್ಷ ಪಿ.ಪ್ರೇಮಕುಮಾರ್,
ಅರಸಿಕೇರಿ ಬ್ಲಾಕ್ ಅಧ್ಯಕ್ಷ ಎಸ್.ಮಂಜುನಾಥ, ಮುಖಂಡರಾದ ಎಂ.ಬಿ. ಯಶವಂತಗೌಡ, ಎಂ.ಅಜ್ಜಣ್ಣ, ಆಲದಹಳ್ಳಿ ಷಣ್ಮುಖಪ್ಪ, ಪಿ.ಬಿ.ಗೌಡ, ಮುತ್ತಿಗಿ ಜಂಬಣ್ಣ, ಜಿಷಾನ್, ಎಲ್.ಬಿ.ಹಾಲೇಶನಾಯ್ಕ, ಪುರಸಭಾ ಸದಸ್ಯ ಜಾಕೀರ್, ಪ್ರವೀಣ್, ತಿಮ್ಮನಾಯ್ಕ, ಎನ್.ಮಜೀದ್, ಅರುಣ್ ಪೂಜಾರ್, ಪಿ. ಪರಶುರಾಮ್, ತೊಗರಿಕಟ್ಟಿ ಗಂಗಪ್ಪ, ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.