ಹಿಂದೂ ಕಾರ್ಯಕರ್ತನ ಹತ್ಯೆ : ಹಿಂದೂಪರ ಸಂಘಟನೆಗಳ ಆಕ್ರೋಶ

ದಾವಣಗೆರೆ, ಫೆ.22- ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಖಂಡಿಸಿ ನಗರದಲ್ಲಿ ಇಂದು ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು.

ವಿಹೆಚ್‌ಪಿ – ಭಜರಂಗ ದಳ ಜಂಟಿ ಪ್ರತಿಭಟನೆ :  ವಿಶ್ವ ಹಿಂದೂ ಪರಿಷದ್ – ಭಜರಂಗ ದಳದ ವತಿಯಿಂದ ಜಂಟಿಯಾಗಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾ ಯಿಸಿದ್ದ ಸಂಘಟನೆ ಮುಖಂಡರು, ಕಾರ್ಯ ಕರ್ತರು ಹಿಂದೂಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರು. ನಂತರ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಹರ್ಷನ  ಹತ್ಯೆಯಲ್ಲಿ ಎಸ್‍ಡಿಪಿಐ ಮತ್ತು ಪಿಎಫ್‍ಐ ಗಳಂತಹ ದೇಶದ್ರೋಹಿ ಸಂಘಟನೆಗಳ ಕೈವಾಡವಿದೆ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು.   ಹರ್ಷ ನಿಗೆ ನ್ಯಾಯ ದೊರಕಿಸಿಕೊಡ ಬೇಕು ಎಂದು ಸಂಘಟನೆ ಮುಖಂಡರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಸಿ.ಎಸ್.ರಾಜು, ಅಖಾಡ ಪ್ರಮುಖ್ ಹರೀಶ್ ಪವಾರ್, ಮುಖಂಡರಾದ ಪ್ರಹ್ಲಾದ್ ತೇಲ್ಕರ್, ಗೋಪಾಲರಾವ್ ಸಾವಂತ್, ವಸಂತ್ ಕುಮಾರ್, ಕೃಷ್ಣಮೂರ್ತಿ, ಉಮೇಶ ಸೇರಿದಂತೆ ಇತರರು ಭಾಗವಹಿಸಿದ್ದರು.

ಶ್ರೀರಾಮ ಸೇನೆ ಮನವಿ : ಶ್ರೀರಾಮ ಸೇನೆ ಕರ್ನಾಟಕ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಸ್ ಡಿಪಿಐ, ಪಿಎಫ್ಐ, ಸಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಳೆದ ಹಲವಾರು ವರ್ಷಗಳಿಂದ ಎಸ್.ಡಿ.ಪಿ.ಐ, ಪಿ.ಎಫ್.ಐ, ಸಿ.ಎಫ್.ಐ ಸಂಘಟನೆಗಳು ಹರ್ಷನ ಹತ್ಯೆಗೆ ಪ್ರಯತ್ನ ನಡೆಸುತ್ತಿದ್ದರೂ ರಕ್ಷಣೆ ನೀಡದಿರುವುದು ಸರ್ಕಾರದ ನಾಚಿಗೇಡಿನ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಹತ್ಯೆಯ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಉಗ್ರ ಶಿಕ್ಷೆಯಾಗಬೇಕು, ಎಸ್.ಡಿ.ಪಿ.ಐ, ಪಿ.ಎಫ್.ಐ. ಸಿ.ಎಫ್.ಐ ಸಂಘಟನೆಗಳನ್ನು ನಿಷೇಧಿಸಿ ಅದರ ಪ್ರಮುಖರನ್ನು ಒಳಗೆ ಹಾಕಬೇಕು, ಮೃತನ ಕುಟುಂಬಕ್ಕೆ 25 ಲಕ್ಷ ರೂ. ಗಳ ಪರಿಹಾರ ನೀಡಬೇಕು, ಹಿಂದೂ ಕಾರ್ಯಕರ್ತರು ಮತ್ತು ಹಿಂದೂ ನಾಯಕರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್, ರಾಜ್ಯ ಸಂಪರ್ಕ ಪ್ರಮುಖ್ ಪರಶುರಾಮ ನಡುಮನಿ, ಮುಖಂಡರುಗಳಾದ ಬಿ.ಜಿ. ರಾಹುಲ್, ಆಲೂರು ರಾಜಶೇಖರ, ರಾಜು ಸರ್ಕಾರ್, ಶಿಬಾರ್ ರಮೇಶ್, ಶ್ರೀಧರ್, ವಿನೋದ್ ವೆರ್ಣೇಕರ್, ಡಿ.ಬಿ. ವಿನೋದ್ ರಾಜ್, ಕರಾಟೆ ರಮೇಶ್ ಸೇರಿದಂತೆ ಇತರರಿದ್ದರು.

error: Content is protected !!