ಕೊಟ್ಟೂರು (ವಿಜಯನಗರ ಜಿಲ್ಲೆ) ಪಟ್ಟಣದ ಆರಾಧ್ಯದೈವ ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವವು ಶುಕ್ರವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಶುಕ್ರವಾರ ಬೆಳಗಿನ ಜಾವ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಸಂಜೆ ಸ್ವಾಮಿಯನ್ನು ದೇವಸ್ಥಾನದಿಂದ ರಥದವರೆಗೆ ಸಕಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ರಥಕ್ಕೆ ಪ್ರದಕ್ಷಿಣೆ ಹಾಕಿ ಪ್ರತಿಷ್ಠಾಪಿಸಲಾಯಿತು. ಬಳಿಕ ಭಕ್ತರು ತೇರು ಎಳೆದರು.
April 10, 2025