ಹರಿಹರ,ಮಾ.6- ಸರ್ಕಾರಿ ನೌಕರರ ನೂತನ ವಸತಿ ಗೃಹಗಳ ಉದ್ಘಾಟನೆ ಕಾರ್ಯಕ್ರಮವು ನಾಳೆ ದಿನಾಂಕ 7 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗುರು ಭವನದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಶೈಕ್ಷಣಿಕ ಕಾರ್ಯಗಾರ ಮತ್ತು ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಹ ಜರುಗಲಿದೆ ಎಂದು ನಗರದ ರಚನಾ ಕ್ರೀಡಾ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವಸತಿ ಗೃಹಗಳ ಉದ್ಘಾಟನೆಯನ್ನು ಶಾಸಕ ಎಸ್. ರಾಮಪ್ಪ ಮತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಡಲಿದ್ದಾರೆ.
ಅಧ್ಯಕ್ಷತೆಯನ್ನು ತಾಲ್ಲೂಕು ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಭೈರತಿ, ಸಂಸದ ಜಿ.ಎಂ. ಸಿದ್ದೇಶ್ವರ, ನಗರಸಭೆ ಅಧ್ಯಕ್ಷರಾದ ರತ್ನ ಡಿ. ಉಜ್ಜೇಶ್, ಎಪಿಎಂಸಿ ಅಧ್ಯಕ್ಷ ಜಿ. ಮಂಜುನಾಥ್ ಪಾಟೀಲ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಪಾಲಾಕ್ಷ, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಬಿ.ಪಿ ಹರೀಶ್ ಮತ್ತು ಇತರರು ಭಾಗವಹಿಸುವರು.
ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಬಗ್ಗೆ ಶಿವಮೊಗ್ಗದ ಉಪನ್ಯಾಸಕ ಡಾ. ಜಿ.ವಿ. ಹರಿಪ್ರಸಾದ್ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ವಿಜಯ ಮಹಾಂತೇಶ್, ಗೌರವಾಧ್ಯಕ್ಷ ಎಂ. ಉಮಣ್ಣ, ಎ.ಕೆ. ಭೂಮೇಶ್, ಪ್ರಧಾನ ಕಾರ್ಯದರ್ಶಿ ಡಿ.ಟಿ. ಮಂಜುನಾಥ್, ಖಜಾಂಚಿ ಪಿ. ಶಿವಮೂರ್ತಿ, ನಿರ್ದೇಶಕಿ ಯಶೋದಮ್ಮ ಹಾಗು ಇತರರು ಹಾಜರಿದ್ದರು.